24.3 C
Karnataka
Thursday, April 30, 2026

ಸೆಪ್ಟೆಂಬರ್ 16 ರಂದು ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ

ಮಂಗಳೂರು: ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಸೆಪ್ಟೆಂಬರ್ 16 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಪಂಪ್‌ವೆಲ್ ಫಾದರ್ ಮುಲ್ಲರ್ ಕನ್ವೆನ್ನನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರ ಉಪಸ್ಥಿತಿಯಲ್ಲಿ, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರು ಭಾಗವಹಿಸಿ, ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳುವುದು ಹಾಗೂ ವಿವಿಧ ಯೋಜನೆಗಳ ಅರಿವು ಪಡೆದುಕೊಳ್ಳಬಹುದು ಎಂದು ದ. ಕ ಉಪವಿಭಾಗ 1 ಮತ್ತು 2 ರ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles