24.9 C
Karnataka
Thursday, April 30, 2026

ಯಶವಂತಪುರ – ಮಂಗಳೂರು ನಡುವೆ ವಿಶೇಷ ರೈಲು

ಮ೦ಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ
ಮತ್ತು ಮಂಗಳೂರು ಜಂಕ್ಷನ್ ನಡುವೆ ಒಂದು ಟ್ರಿಪ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ.
ರೈಲು ಸಂಖ್ಯೆ 06257 ಯಶವಂತಪುರ – ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 30, 2025 ರಂದು ರಾತ್ರಿ11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ,ರೈಲು ಸಂಖ್ಯೆ 06258 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 1, 2025 ರಂದುಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11:30ಕ್ಕೆ ಯಶವಂತಪುರ ತಲುಪಲಿದೆ.ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್ ಕಬಕ ಪುತ್ತೂರು ಮತ್ತು ಬಂಟವಾಳನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ. ಈ ರೈಲು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ ಎರಡು ಎಸಿ 2-ಟೈರ್, ಮೂರು ಎಸಿ 3-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ಎರಡನೇ ದರ್ಜೆ ಮತ್ತು ಎರಡು ಎಸ್‌ಎಲ್‌ಆರ್/ಡಿ ಬೋಗಿಗಳು ಇರಲಿವೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles