ಮ೦ಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆಯು ವಿಶೇಷ
ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರಗಳು ಹೀಗಿವೆ:
*ರೈಲು ಸಂಖ್ಯೆ 07353/07354 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್): ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 17 ರಂದು ಸ೦ಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಕ್ಟೋಬರ್ 18 ರಂದು ಬೆಳಗ್ಗೆ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ,ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
*ರೈಲು ಸಂಖ್ಯೆ 07354 ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 18 ರಂದು ಮಧ್ಯಾಹ್ನ 2 :35 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11 :15 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲುಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
*ರೈಲು ಸಂಖ್ಯೆ 06229/06230 ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ (1ಟ್ರಿಪ್):
ರೈಲು ಸಂಖ್ಯೆ 06229 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಅಕ್ಟೋಬರ್ 19ರ೦ದು ರಾತ್ರಿ 12.15 ಗಂಟೆಗೆ ಯಶವಂತಪುರದಿಂದ ಹೊರಟು, ಬೆಳಗ್ಗೆ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಕುಣಿಗಲ್,
ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
*ರೈಲು ಸಂಖ್ಯೆ 06230 ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 19 ರಂದು ಮಧ್ಯಾಹ್ನ 14:35 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ರಾತ್ರಿ 12:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ತಲುಪಲಿದೆ. ಇದು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ಈ ಎರಡೂ ವಿಶೇಷ ರೈಲುಗಳು (07353/07354 ಮತ್ತು 06229/06230) 20 ಬೋಗಿಗಳನ್ನು ಒಳಗೊಂಡಿರುತ್ತವೆ:
(1 ಫಸ್ಟ್ ಕಮ್ ಸೆಕೆಂಡ್ ಎಸಿ, 1 ಎಸಿ 2-ಟೈರ್, 2 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ಕ ಕ್ಲಾಸ್, ಮತ್ತು 2 ಎಸ್‌ಎಲ್‌ಆರ್/ಡಿ ಬೋಗಿಗಳು)


