24.5 C
Karnataka
Thursday, April 30, 2026

ಚೇತನಾ ಬಾಲ ವಿಕಾಸ ಕೇಂದ್ರದ ಮಕ್ಕಳೊಂದಿಗೆ ದೀಪಾವಳಿ ಆಚರಣೆ

ಮಂಗಳೂರು : ವಿಶೇಷ ಚೇತನ ಮಕ್ಕಳು ದೇವರ ಸಮಾನರಾಗಿದ್ದು ಅವರ ಬದುಕಿಗೆ ಬೆಳಕಾಗುವುದು ಸಮಾಜದ ಕರ್ತವ್ಯ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ರೈತ ಕುಡ್ಲ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿ ಪಾರ್ಕ್ ನಲ್ಲಿ ಆಯೋಜಿಸಲಾದ ರೈತ ಮೇಳದಲ್ಲಿ ಚೇತನಾ ಬಾಲ ವಿಕಾಸ ಕೇಂದ್ರದ ಮಕ್ಕಳೊಂದಿಗೆ ದೀಪಾವಳಿ ಆಚರಣೆ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೀಪಾವಳಿ ಕೃಷಿ ಬದುಕಿನ ಹಬ್ಬವಾಗಿದ್ದು, ರೈತ ಮೇಳದಲ್ಲಿ ಕೃಷಿ ಉತ್ಪನ್ನ ಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಕೃಷಿಕರ ಬದುಕಿ ಗೂ ಬೆಳಕು ನೀಡುವ ಕಾರ್ಯವಾಗಿದೆ ಎಂದು
ಅವರು ಶ್ಲಾಘಿಸಿದರು.
ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಡಾ. ವೈ. ಭರತ್ ಶೆಟ್ಟಿ, ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಉದ್ಯಮಿ ಸತ್ಯೇಂದ್ರ ಶರ್ಮ, ಋತ್ವಿಕ್ ಕದ್ರಿ , ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ .ಬಿ .ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ಸ್ವಾಗತಿಸಿ, ಕಾರ್ಯದರ್ಶಿ ಲತೇಶ್  ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles