ಮಂಗಳೂರು: ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ. ಮುಖ್ಯಮಂತ್ರಿ ಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು.
ಪ್ರಧಾನಿಗಳ ಮಂಗಳೂರು ಭೇಟಿ ಸಂದರ್ಭದಲ್ಲಿ ಅವರಿಗಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ನೀಡಿ, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವುದನ್ನು ತಿಳಿಸಿ, ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿರುವ ಪತ್ರ ಇದಾಗಿದೆ ಎಂದು ತಿಳಿಸಿ, ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಿಕೊಡಲಾಯಿತು.


