ಮ೦ಗಳೂರು: ಮುಲ್ಕಿ ಪೊಲೀಸ್ ಠಾಣಾ ಸರಹದ್ದಿನ ದಾಮಸಕಟ್ಟೆ ನಿವಾಸಿಗಳಾದ ಹಿರಿಯ ನಾಗರಿಕರನ್ನು ಮುಲ್ಕಿ ಪೊಲೀಸ್ ಹಾಗೂ ಕಿನ್ನಿಗೋಳಿ ಕೆನರಾ ಬ್ಯಾಂಕ್ ಮ್ಯಾನೇಜರ್ ಡಿಜಿಟಲ್ ಅರೆಸ್ಟ್ ವ೦ಚನೆಯಿ೦ದ ಪಾರುಮಾಡಿದ್ದಾರೆ.
ಮುಲ್ಕಿ ಪೊಲೀಸ್ ಠಾಣಾ ಸರಹದ್ದಿನ ದಾಮಸಕಟ್ಟೆ ನಿವಾಸಿಗಳಾದ ವೃದ್ದ ದಂಪತಿಯನ್ನು ಡಿ.1 ರಂದು ಯಾರೋ ಅಪರಿಚಿತರು ಉತ್ತರ ಪ್ರದೇಶದ ಸಿ.ಐ.ಡಿ ಪೊಲೀಸ್ ಎಂಬ ಸೊಗಿನಲ್ಲಿ ಮೊಬೈಲ್ ಫೋನ್ ವಾಟ್ಸ್ ಅಪ್ ಮೂಲಕ ಸಂಪರ್ಕಿಸಿ, ಅವರುಗಳು 6 ಕೋಟಿ ಮೋಸ ಮಾಡಿದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್ಗೆ ಒಳಪಡಿಸಿ, ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ಸೂಚಿಸಿದ್ದರು. ಈ ಮೇರೆಗೆ ವೃದ್ದ ದಂಪತಿ ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ಹೋಗಿದ್ದರು. , ಈ ಸಮಯ ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ರವರು ದೊಡ್ಡ ಮೊತ್ತದ ಹಣವನ್ನು ವರ್ಗಾವಣೆ ಮಾಡುತ್ತಿರುವ ಬಗ್ಗೆ ಸದ್ರಿಯವರ ಬಳಿ ವಿಚಾರಿಸಿದ್ದು ವೃದ್ದದಂಪತಿ ಸರಿಯಾದ ಉತ್ತರ ನೀಡಿರಲಿಲ್ಲ. ಇದರಿ೦ದ ಸಂಶಯಗೊಂಡು, ಸೈಬರ್ ವಂಚಕರು ಒದಗಿಸಿದಂತಹ ಖಾತೆಗೆ ಹಣವನ್ನು ವರ್ಗಾವಣೆ ಮಾಡದೇ, ಬ್ಯಾಂಕ್ ಮ್ಯಾನೇಜರ ರವರು ಕಿನ್ನಿಗೋಳಿ ಪರಿಸರದ ಬೀಟ್ ಸಿಬ್ಬಂದಿ ಹೆಚ್ ಸಿ ಯಶವಂತ ಕುಮಾರ ಹಾಗೂ ಠಾಣಾ ಗುಪ್ತವಾರ್ತೆ ಸಿಬ್ಬಂದಿ ಹೆಚ್ ಸಿ ಕಿಶೋರ ಅವರಿಗೆ ದೂರವಾಣಿ ಕರೆ ಮಾಡಿ ಈ ಬಗ್ಗೆ ತಿಳಿಸಿದರು. .
ಕೂಡಲೇ ಕಾರ್ಯಪ್ರವೃತ್ತರಾದ ಮುಲ್ಕಿ ಪೊಲೀಸರು ವೃದ್ದ ದಂಪತಿಗಳ ಮನೆಗೆ ತೆರಳಿ ಅವರ ಮೊಬೈಲ್ನ್ನು ಪರಿಶೀಲಿಸಿದ್ದು ಈ ಸಮಯ ಅವರು ಡಿಜಿಟಲ್ ಅರೆಸ್ಟ್ಗೆ ಒಳಗಾಗಿರುವುದು ಕಂಡುಬಂದಿದೆ. ಕೂಡಲೇ ಪೊಲೀಸ್ ಸಿಬ್ಬಂದಿಗಳು ಬ್ಯಾಂಕ್ ಮ್ಯಾನೇಜರ ರವರಿಗೆ ಕರೆ ಮಾಡಿ ವಿಚಾರ ತಿಳಿಸಿ ವರ್ಗಾವಣೆ ಮಾಡದಂತೆ ಸೂಚಿಸಿ, ವೃದ್ದ ದಂಪತಿಗಳಿಗೆ ತಿಳುವಳಿಕೆ ನೀಡಿ ಅವರ ಹಣವನ್ನು ಉಳಿಸಿರುತ್ತಾರೆ. ಇದರ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯವರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿರುತ್ತಾರೆ.


