ಮಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಂಗಳೂರು ಮೀನುಗಾರಿಕೆ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಡಿಸೆಂಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮೀನುಗಾರಿಕೆ ಬಂದರು, ಸೌತ್‍ವಾರ್ಫ್‍ನಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವಮಂಕಾಳ ಎಸ್. ವೈದ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶಾಸಕ ಡಿ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.


