ಮಂಗಳೂರು : ಕಠಿಣ ಪರಿಶ್ರಮ , ಶ್ರದ್ಧೆಯಿಂದ ಸಂಗೀತ ಕಲೆ ಒಲಿಯುತ್ತದೆ. ನಿರಂತರ ಅಭ್ಯಾಸದಿಂದ ಮಾತ್ರ ಶ್ರೇಷ್ಠ ಕಲಾವಿದನಾಗಿ ರೂಪುಗೊಳ್ಳಬಹುದು ಎಂದು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಉಷಾಪ್ರಭಾ ನಾಯಕ್ ಹೇಳಿದರು.
ಮಂಗಳೂರಿನ ಕಲಾ ಸಾಧನಾ ಸಂಸ್ಥೆ ವತಿಯಿಂದ ಆಯೋಜಿಸಲಾದ ಸ್ವರಾನುಬಂಧ ಸಂಗೀತ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು ಸಂಗೀತ ಕಲಾವಿದರ ಬೆಳವಣಿಗೆಗೆ ಎಲ್ಲರ ಪ್ರೋತ್ಸಾಹ ಅಗತ್ಯ ಎಂದರು.
ಕಲಾವಿದರಿಗೆ ಸನ್ಮಾನ ನೆರವೇರಿಸಿ ಮಾತನಾಡಿದ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ ಸಂಗೀತ ಆಲಿಸುವುದರ ಮೂಲಕ ಮಾನಸಿಕ ನೆಮ್ಮದಿ ಪಡೆಯಲು ಸಾಧ್ಯ ಎಂದರು
ಎಂ ಆರ್ ಪಿ ಎಲ್ ನ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ನ ಜನರಲ್ ಮ್ಯಾನೇಜರ್ ದಿವಾಕರ್. ಕೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ ಮುಖ್ಯ ಅತಿಥಿಗಳಾಗಿದ್ದರು.
ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರಾದ ಉಸ್ತಾದ್ ರಫೀಕ್ ಖಾನ್, ಪಂಡಿತ್ ರಾಜೇಂದ್ರ ನಾಕೋಡ್ ಮತ್ತು ಪಂಡಿತ್ ಸಮೀರ್ ರಾವ್ ಇವರುಗಳನ್ನು ಸನ್ಮಾನಿಸಲಾಯಿತು.
ಕಲಾ ಸಾಧನಾ ಸಂಸ್ಥೆ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್, ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು. ಪತ್ರಕರ್ತ ಭಾಸ್ಕರ್ ರೈ ಕಟ್ಟಾ ಸ್ವಾಗತಿಸಿ, ಪುಷ್ಪರಾಜ್ ಬಿ ಎನ್ ವಂದಿಸಿದರು. ಆಕಾಂಕ್ಷ ಶ್ರೀಶ ನಾಯಕ್ ಕಾರ್ಯಕ್ರಮ ನಿರೂಪಿಸಿದರು.


