ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ರಾಜ್ಯ/ ಜಿಲ್ಲಾ ಕ್ರೀಡಾ ಶಾಲೆ/ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ವಿವರ : ಜನವರಿ 21 ರಂದು ಬೆಳಿಗ್ಗೆ 10 ಗಂಟೆಗೆ ಮೂಡಬಿದ್ರೆ ಸ್ವರಾಜ್ ಮೈದಾನ, ಜನವರಿ 23 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಜನವರಿ 24 ರಂದು ಬೆಳಿಗ್ಗೆ 10 ಗಂಟೆಗೆ ಬಂಟ್ವಾಳದ ವಿಟ್ಲ ವಿಠಲ ಪ್ರೌಢಶಾಲೆ, ಜನವರಿ 27 ರಂದು ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಸರ್ಕಾರಿ ಪ್ರೌಢಶಾಲೆ, ಜನವರಿ 28 ರಂದು ಬೆಳಿಗ್ಗೆ 10 ಗಂಟೆಗೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳೂರು ವಿಶ್ವವಿದ್ಯಾಲಯ ಮೈದಾನ, ಜನವರಿ 29 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಕೊಂಬೆಟ್ಟು ತಾಲ್ಲೂಕು ಕ್ರೀಡಾಂಗಣ, ಜನವರಿ 30 ರಂದು ಬೆಳಿಗ್ಗೆ 10 ಗಂಟೆಗೆ ಕಡಬ ತಾಲೂಕಿನ ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನವರಿ 31 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಿರಿಯರ ವಿಭಾಗ – 5ನೇ ತರಗತಿ :- ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಬಯಸುವ ಕ್ರೀಡಾಪಟುಗಳು ಪ್ರಸ್ತುತ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2026-27ನೇ ಸಾಲಿಗೆ 5ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಬೇಕು ಹಾಗೂ 2026 ರ ಜೂನ್ 1 ಕ್ಕೆ 11 ವರ್ಷ ಒಳಗಿನವರಾಗಿರಬೇಕು.
ಕಿರಿಯರ ವಿಭಾಗ – 8ನೇ ತರಗತಿ :- ಕಿರಿಯರ ವಿಭಾಗದ ಕ್ರೀಡಾ ಶಾಲೆ/ ವಸತಿ ನಿಲಯಗಳಿಗೆ ಆಯ್ಕೆ ಬಯಸುವ ಕ್ರೀಡಾಪಟುಗಳು ಪ್ರಸ್ತುತ ವರ್ಷ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2026-27ನೇ ಸಾಲಿಗೆ 8 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಬೇಕು ಹಾಗೂ 2026 ರ ಜೂನ್ 1 ಕ್ಕೆ 14 ವರ್ಷ ಒಳಗಿನವರಾಗಿರಬೇಕು..
ಹಿರಿಯರ ವಿಭಾಗ :- ಹಿರಿಯ ವಿಭಾಗದ ಕ್ರೀಡಾ ಶಾಲೆ/ ವಸತಿ ನಿಲಯಗಳಿಗೆ ಆಯ್ಕೆ ಬಯಸುವ ಕ್ರೀಡಾಪಟುಗಳು ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2026-27 ನೇ ಸಾಲಿಗೆ ಪ್ರಥಮ ಪಿ.ಯು.ಸಿ. ಗೆ ಪ್ರವೇಶ ಪಡೆಯಲು ಅರ್ಹತೆ ಪಡೆದು, 2026 ರ ಜೂನ್ 1 ಕ್ಕೆ 17 ವರ್ಷ ಒಳಗಿನವರಾಗಿರಬೇಕು.
ಜಿಲ್ಲಾ ಮತ್ತು ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಸಂಬಂಧಪಟ್ಟ ತಾಲೂಕುಗಳಲ್ಲಿ ಭಾಗವಹಿಸಬಹುದು. ಸಂಬಂಧಪಟ್ಟ ತಾಲೂಕಿನಲ್ಲಿ ಭಾಗವಹಿಸಲು ಸಾಧ್ಯವಾಗದೇ ಇದ್ದಲ್ಲಿ ಜಿಲ್ಲೆಯ ಇತರೆ ತಾಲೂಕಿನಲ್ಲಿ ನಡೆಯುವ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಭಾಗವಹಿಸುವ ವಿದ್ಯಾರ್ಥಿಗಳು ದೃಢೀಕೃತ ಜನನ ಪ್ರಮಾಣ ಪತ್ರವನ್ನು ತರಬೇಕು.
ಹೆಚ್ಚಿನ ಮಾಹಿತಿಗೆ ತರಬೇತುದಾರರನ್ನು ಅಥವಾ (ದೂ.ಸಂಖ್ಯೆ-7019144302, 8494830078 ) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರನ್ನು (ದೂರವಾಣಿ ಸಂಖ್ಯೆ- 0824- 2451264) ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


