ಮ೦ಗಳೂರು:1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಸಹಚರ ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ ಅಲಿಯಾಸ್ ಕೆ. ಕೃಷ್ಣಪ್ಪಅಲಿಯಾಸ್ ಕೃಷ್ಣ ( 55 ) ಎ೦ಬಾತನನ್ನು ಮಂಗಳೂರು ಉರ್ವ ಪೊಲೀಸರು ಆಂದ್ರಪ್ರದೇಶದಲ್ಲಿ ಬಂಧಿಸಿದ್ದಾರೆ.

ಈತ ಬೆಂಗಳೂರು ಜಿಲ್ಲೆಯಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ನಿವಾಸಿಯಾಗಿದ್ದು ಪ್ರಸ್ತುತ 29 ವರ್ಷಗಳಿಂದ ತಲೆಮರೆಸಿಕೊಂಡು ಆಂದ್ರಪ್ರದೇಶ ರಾಜ್ಯದ ಅನ್ನಮಯ್ಯ ಜಿಲ್ಲೆಯ, ಮದನಪಳ್ಳೆ ಎಂಬಲ್ಲಿ ವಾಸವಾಗಿದ್ದ. ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಪ್ರಕರಣದ ವಿವರ:-
11-10-1997 ರ೦ದು ಮಧ್ಯರಾತ್ರಿ ಮಂಗಳೂರು ಉರ್ವಾ ಮಾರಿಗುಡಿ ಕ್ರಾಸ್ ಬಳಿಯಿರುವ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರಗಳಾದ ದೊಡ್ಡ ಹನುಮ ಅಲಿಯಾಸ್ ಹನುಮ , ವೆಂಕಟೇಶ @ ಚಂದ್ರ , ಮುನಿಕೃಷ್ಣ ಅಲಿಯಾಸ್ ಕೃಷ್ಣ ಮತ್ತು , ನಲ್ಲತಿಮ್ಮ ಅಲಿಯಾಸ್ ತಿಮ್ಮ, ಕೃಷ್ಣ ಅಲಿಯಾಸ್ ದಂಡುಪಾಳ್ಯ ಕೃಷ್ಣ ಅಲಿಯಾಸ್ ನಾಗರಾಜ , ಚಿಕ್ಕ ಹನುಮ , ಕೃಷ್ಣಾಡುಅಲಿಯಾಸ್ ಕೃಷ್ಣ , ವೆಂಕಟೇಶ್ ಅಲಿಯಾಸ್ ರಮೇಶ್ ಎ೦ಬವರು ಮನೆಯಲ್ಲಿದ್ದ ಶ್ರೀಮತಿ ಲೂವಿಸ್ ಡಿಮೆಲ್ಲೋ( 80ವಷ೯ ) ಹಾಗೂ ರಂಜಿತ್ ವೇಗಸ್( 19 ವರ್ಷ)ಅವರನ್ನು ಕೊಲೆ ಮಾಡಿ ಚಿನ್ನಾಭರಣಗಳ್ನು ದೊಚಿಕೊಂಡು ಹೋಗಿದ್ದರು. ಸದ್ರಿ ಆಪಾದಿತರುಗಳ ಮೇಲೆ ತನಿಖೆ ನಡೆಸಿ ದೋಷರೋಪಣಾ ಪಟ್ಟಿಯನ್ನು ನಾಯಾಲಯಕ್ಕೆ ಸಲ್ಲಿಸಿದಂತೆ 34 ನೇ ಅಪರ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಧೀಶರು (ವಿಶೇಷ ನ್ಯಾಯಾಲಯ), ಕೇಂದ್ರ ಕಾರಾಗೃಹ ಆವರಣ ಪರಪ್ಪನ ಅಗ್ರಹಾರ ಬೆಂಗಳೂರು ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯಗೊಂಡು ದೊಡ್ಡ ಹನುಮ @ ಹನುಮ ಹಾಗೂ ಇತರ 5 ಆಪಾದಿತರು ಸೇರಿ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿರುತ್ತದೆ.
ಈ ಪ್ರಕರಣದಲ್ಲಿ ಆಪಾದಿತನಾದ ಚಿಕ್ಕ ಹನುಮ ತನ್ನ ಬುದ್ದಿವಂತಿಕೆಯನ್ನು ಬಳಸಿ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ಎಂದು ಹೆಸರು ಬದಲಾಯಿಸಿಕೊಂಡು ಬ೦ಧನಕ್ಕೆ , ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಆಂದ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನ ಮೇಲೆ ಮಂಗಳೂರು ಮಾನ್ಯ JMFC 2ನೇ ನ್ಯಾಯಾಲಯವು 2010 ರಲ್ಲಿ LPC ವಾರೆಂಟ್ ಹೊರಡಿಸಿತ್ತು. ಈತನ ಮೇಲೆ ಕರ್ನಾಟಕ ರಾಜ್ಯದಲ್ಲಿ ಸುಮಾರು 13 ಕೊಲೆ ,ದರೋಡೆ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. .
ಈ ಪತ್ತೆ ಕಾರ್ಯದಲ್ಲಿ ಉರ್ವಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಶ್ಯಾಮ್ ಸುಂಧರ್ ಹೆಚ್.ಎಮ್ , ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ಎಲ್.ಮಂಜುಳಾ ಎಎಸ್ಐ ವಿನಯ ಕುಮಾರ್ ಮತ್ತು ಸಿಬ್ಬಂದಿಗಳಾದ ಲಲಿತಲಕ್ಷ್ಮಿ, ಅನಿಲ್, ಪ್ರಮೋದ್, ಆತ್ನಾನಂದ , ಹರೀಶ್ ರವರು ಶ್ರಮಿಸಿರುತ್ತಾರೆ. ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಶ೦ಸೆಯನ್ನು ವ್ಯಕ್ತ ಪಡಿಸಿ, ಹೆಚ್ಚು ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿ ಹಾಗೂ ಐಜಿಪಿ ರವರಿಗೆ ಶಿಫಾರಸ್ಸು ಮಾಡಿದ್ದಾರೆ.


