ಮಂಗಳೂರು: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಮಂಗಳೂರು ನಗರದಲ್ಲಿ ಫೆಬ್ರವರಿ 20 ರಿಂದ 28 ರವರೆಗೆ ಕರಾವಳಿ ಮೈದಾನದಲ್ಲಿ ರಾಷ್ಟ್ರ ಮಟ್ಟದ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ- ನಮ್ಮ ಸರಸ್ ಮೇಳ-2026ನ್ನು ಆಯೋಜಿಸಲಾಗಿದೆ.
ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು ಪ್ರತಿ ದಿನ ಬೆಳಿಗ್ಗೆ 10.30 ಯಿಂದ ರಾತ್ರಿ 9.30 ರವರೆಗೆ ಮೇಳದ ಪ್ರದರ್ಶನಕ್ಕೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದಲ್ಲಿ ಅಭಿಯಾನದಡಿ ಗ್ರಾಮೀಣ 3.05 ಲಕ್ಷ ಸ್ವ-ಸಹಾಯ ಗುಂಪುಗಳಡಿ 32.00 ಲಕ್ಷ ಕುಟುಂಬಗಳನ್ನು ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಹಾಗೂ 39 ಸಾವಿರ ಸ್ವ-ಸಹಾಯ ಗುಂಪುಗಳಡಿ 3.90 ಲಕ್ಷ ಕುಟುಂಬಗಳನ್ನು ನಗರ ಅಭಿಯಾನದಡಿ ಸಂಘಟಿಸಲಾಗಿರುತ್ತದೆ. ಪ್ರತಿಯೊಬ್ಬ ಸ್ವ- ಸಹಾಯ ಗುಂಪಿನ ಮಹಿಳೆಯರ ಜೀವನೋಪಾಯದೊಂದಿಗೆ ಸ್ವಾವಲಂಬನೆಯ ಜೀವನವನ್ನು ನಿರ್ವಹಿಸುವಲ್ಲಿ ಅವಶ್ಯಕ ಸಾಮಥ್ರ್ಯಾಭಿವೃದ್ಧಿ ಕೌಶಲ್ಯ ತರಬೇತಿಗಳು ಉತ್ಪನ್ನಗಳ ಬ್ರ್ಯಾಂಡಿಂಗ್ ಪ್ಯಾಕಿಂಗ್ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ವ್ಯವಸ್ಥೆಗಳನ್ನು ಕಲ್ಪಿಸುವ ಮೂಲಕ ಮಹಿಳೆಯರು ಸಬಲೀಕರಣಕ್ಕಾಗಿ ನಿರಂತರ ಬೆಂಬಲಿಸಲಾಗುತ್ತಿದೆ.
ರಾಜ್ಯದಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸುವ ಉತ್ಪನ್ನಗಳ ಮಾರಾಟಕ್ಕೆ ಹಳ್ಳಿಸಂತೆ, ತಾಲ್ಲೂಕು ಮಟ್ಟದಲ್ಲಿ ಮಾಸಿಕಸಂತೆ, ಜಿಲ್ಲಾ ವಸ್ತುಪ್ರದರ್ಶನ ಮಾರಾಟಮೇಳ ಏರ್ಪಡಿಸುವುದಷ್ಟೆಅಲ್ಲದೆ ಇತರೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನಡೆಯುವ ಮೇಳಗಳಿಗೆ ರಾಜ್ಯದ ಮಹಿಳೆಯರನ್ನು ನಿಯೋಜನೆ ಮಾಡುವ ಮೂಲಕ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲಾಗುತ್ತಿದೆ.
ಹೊರ ರಾಜ್ಯ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳೊಂದಿಗೆ ಭಾಗವಹಿಸುತ್ತಿದ್ದು, 100ಕ್ಕೂ ಅಧಿಕ ಮಳಿಗೆಗಳಲ್ಲಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮತ್ತು ಪ್ರತ್ಯೇಕವಾಗಿ ಆಹಾರ ಮೇಳದ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ.
ಮೇಳದ ವೈಶಿಷ್ಠತೆಗಳು: ಈ ಮೇಳದ ಮಳಿಗೆಗಳಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ವಿವಿಧವಾದ ಆಕರ್ಷಣೆಯ ಬಟ್ಟೆಗಳು, ನಾರಿನ ಉತ್ಪನ್ನದ ಬ್ಯಾಗ್‍ಗಳು, ಮಸಾಲಾ ಉತ್ಪನ್ನಗಳು, ಸಿರಿಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಖಾದಿ ಉತ್ಪನ್ನಗಳು, ಬಾಳೆನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಆಯುರ್ವೇದ ಉತ್ಪನ್ನಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು, ಆಹಾರ ಉತ್ಪನ್ನಗಳು ಮುಂತಾದವುಗಳು ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿದೆ.
“ಅಕ್ಕ-ಕೆಫೆ” ಸರ್ಕಾರವು 2024-25 ಹಾಗೂ 2025-26ನೇಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ ಈಗಾಗಲೇ 23 ‘ಅಕ್ಕ ಕೆಫೆ’ಗಳನ್ನು ಒಂದೇ ಮಾದರಿ ವಿನ್ಯಾಸದಡಿ ಕಾರ್ಯನಿರ್ವಹಿಸುತ್ತಿದ್ದು, 39 ಅಕ್ಕ ಕೆಫೆಗಳ ಅನುμÁ್ಠನ ಪ್ರಗತಿಯಲ್ಲಿದ್ದು ಒಟ್ಟು 200 ಕ್ಕೂ ಅಧಿಕ ಅಕ್ಕ ಕೆಫೆಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ. ಕಾರ್ಯಕ್ರಮದಡಿ ಪ್ರತಿ ಅಕ್ಕ ಕೆಫೆಯಡಿ 5-6 ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜೀವನೋಪಾಯಕ್ಕೆ ಉದ್ಯೋಗ ಕಲ್ಪಿಸಲಾಗುತ್ತಿದೆ. ಮುಂದುವರೆದು,‘ಅಕ್ಕ-ಕೆಫೆ’ ಕಾರ್ಯಕ್ರಮದ ಭಾಗವಾಗಿ ಈ ಮೇಳದ ಮೈದಾನದಲ್ಲಿನ “ಅಕ್ಕ-ಕೆಫೆ” (ಅಕ್ಕಫುಡ್ ಕೋರ್ಟ್)ನಲ್ಲಿ ಶೀರ್ಷಿಕೆಯಡಿ ಆಕರ್ಷಣೀಯವಾಗಿ ಆಯೋಜಿಸಲಾಗುತ್ತಿದೆ.
ಈ ಅಕ್ಕ ಆಹಾರ ಮಳಿಗೆಗಳಲ್ಲಿ (ಅಕ್ಕಫುಡ್ ಕೋರ್ಟ್)ನಲ್ಲಿ ಉತ್ತರಕರ್ನಾಟಕದಲ್ಲಿ ಹೆಸರುವಾಸಿಯಾದ ಗಿರಮಿಟ್/ಚುರುಮರಿ ಮಂಡಕ್ಕಿ, ಜೋಳದಖಡಕ್ ಬಿಸಿರೊಟ್ಟಿ, ಹೋಳಿಗೆ ಸೇರಿದಂತೆ ಬೆಳಗಾವಿ ಕುಂದಾ, ಧಾರವಾಡ ಪೇಡ, ಮೈಸೂರ್‍ಪಾಕ್, ಮಂಗಳೂರು ನೀರ್‍ದೋಸೆ, ಖಾರಬಾತ್, ಕಡಬು ಮತ್ತು ಮಾಂಸಹಾರಿ ಆಹಾರಗಳಾದ ಫ್ರಾನ್ಸ್ ಪ್ರೈ, ರೋಟಿ-ಚಿಕನ್‍ಸುಕ್ಕ, ರಾಗಿಮುದ್ದೆ- ಚಿಕನ್‍ಕರಿ ಬಿರಿಯಾನಿ, ಫ್ರೆಶ್ ಜ್ಯೂಸ್ ಜೊತೆಗೆ ಹೊರರಾಜ್ಯದ ತಿನಿಸುಗಳೂ ಮುಂತಾದವುಗಳನ್ನು ಸ್ಥಳದಲ್ಲೇ ತಯಾರಿಸಿಕೊಡಲಾಗುತ್ತದೆ.
ಪ್ರತಿ ದಿನ ಸಂಜೆ 6.30 ರಿಂದ 9 ಗಂಟೆಯವರೆಗೆ ಮೇಳದ ಆವರಣದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ. ಕನ್ನಡ ಮತ್ತು ಸಾಂಸ್ಕøತಿಕ ಇಲಾಖೆಯ ಸಹಯೋಗದಲ್ಲಿ ಸಂಗೀತ, ನೃತ್ಯ ರೂಪಕಗಳು, ರಾಜ್ಯದ ಪ್ರಖ್ಯಾತ ಗಾಯಕರಿಂದ ಸಾಂಸ್ಕøತಿಕ ಸಂಜೆ ಏರ್ಪಡಿಸಲಾಗಿದೆ.
ತರಬೇತಿ ಪ್ರತಿ ದಿನ ಬೆಳಿಗ್ಗೆ 11.30 ರಿಂದ 1.30 ರವರೆಗೆ ಮಹಿಳೆಯರು ಉದ್ಯಮ ಚಟುವಟಿಕೆ ಕೈಗೊಳ್ಳಲು ಬೆಂಬಲಿಸುವ ವಿವಿಧ ತರಬೇತಿ ಹಾಗೂ ಉಪನ್ಯಾಸಗಳನ್ನು ಆಯೋಜಿಸಲಾಗಿದೆ.
ಮಂಗಳೂರಿನಲ್ಲಿ ಮೊದಲನೇ ಬಾರಿಗೆ ಆಯೋಜಿಸಲಾಗುತ್ತಿರುವ ಈ ಮೇಳದಲ್ಲಿ ಪ್ರಮುಖವಾಗಿ ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುತ್ತಿರುವುದರಿಂದ ಹೆಚ್ಚು ಹೆಚ್ಚು ಸಾರ್ವಜನಿಕರು ಈ ಮೇಳದ ಸದುಪಯೋಗವನ್ನು ಪಡೆದುಕೊಂಡು ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚಿನ ವಹಿವಾಟಿನೊಂದಿಗೆ ಅವರ ಆರ್ಥಿಕ ಸಬಲತೆಗೆ ಬೆಂಬಲಿಸುವಲ್ಲಿ ನಾಡಿನ ಹಾಗೂ ಕರಾವಳಿಯ ಸಾರ್ವಜನಿಕರು ಕೈಜೋಡಿಸಲಿದ್ದಾರೆ ಎಂಬ ಆಶಾವಾದದ ನಿರೀಕ್ಷೆ ಹೊಂದಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


