24.9 C
Karnataka
Thursday, April 30, 2026

ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಯುವತಿಯರಿಗೆ ವ೦ಚಿಸುತ್ತಿದ್ದ ಆರೋಪಿಯ ಬ೦ಧನ

ಮ೦ಗಳೂರು: ಮದುವೆಯಾಗಿ ಮತ್ತು ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಯುವತಿಯರಿಗೆ ವ೦ಚಿಸುತ್ತಿದ್ದ ಹಾಗೂ ಅತನಿಗೆ ಸಹಕರಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬ೦ಧಿಸಿದ್ದಾರೆ. ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಹಾಗೂ ಅತನಿಗೆ ಸಹಕರಿಸುತ್ತಿದ್ದ ಮುಲ್ಕಿ ನಿವಾಸಿ ಭಾಸ್ಕರ್ ಬ೦ಧಿತ ಆರೋಪಿಗಳು.


ಆರೋಪಿ ಸುಶಾಂತ್ ಪೂಜಾರಿ ಮಹಾರಾಷ್ಟ್ರದ ನವ ಮುಂಬೈ ನ ಘನಸೋಳಿಯಲ್ಲಿ ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಮಹಿಳೆಯೋವ೯ರ ಪರಿಚಯ ಮಾಡಿಕೊ೦ಡು 2/02/2025 ರಲ್ಲಿ ಮದುವೆಯಾಗಿದ್ದ. ಆಕೆಯನ್ನು ನಂಬಿಸಿ ಹಂತ ಹಂತವಾಗಿ 6,60,000/- ಹಣವನ್ನು ಪಡೆದುಕೊಂಡು ಬಳಿಕ ನಾಪತ್ತೆಯಾಗಿದ್ದ. ನಂತರದ ದಿನಗಳಲ್ಲಿಈತನ ಬಗ್ಗೆ ಅನುಮಾನಗೊಂಡ ಮಹಿಳೆ ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿಯಿತು. ನೊಂದ ಮಹಿಳೆಯು ಕಾವೂರು ಪೊಲೀಸು ಠಾಣೆಯಲ್ಲಿ ಈತನ ಬಗ್ಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿ ಕೊಳ್ಳಲಾಗಿತ್ತು.

ಆರೋಪಿ ಸುಶಾಂತ್ ಪೂಜಾರಿಯನ್ನು ಫೆ.5 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆತನ ವ೦ಚನೆ ಪ್ರಕರಣಗಳು ಬಯಲಾಯಿತು.ಆತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿದ್ದ ಹಾಗೂ ಉಡುಪಿ 2 ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿದ್ದ, ಮುಂಬೈನ 2 ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುವುದಲ್ಲದೆ ಬೆಂಗಳೂರಿನಲ್ಲಿ 2 ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ. ಕಾರ್ಕಳದ ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾನೆ.
ಪ್ರಕರಣದಲ್ಲಿ ಆರೋಪಿತ ಸುಶಾಂತ್ ಪೂಜಾರಿ ಯವನೊಂದಿಗೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನು ಮುಂಬೈ ನ ಘನಸೋಳಿಯ ಮಹಿಳೆಗೆ ಮತ್ತು ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿತ ಸುಶಾಂತ್ ನನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಮುಂಬೈನಲ್ಲಿ ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡು ಮದುವೆ ನಡೆಸಿದ್ದ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ. ಆರೋಪಿ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಊರ್ವಾ ಪೊಲೀಸ್ ಠಾಣೆ , ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣೆ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿರುತ್ತದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles