24.3 C
Karnataka
Thursday, April 30, 2026

‘ಮಾರ್ಚ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಸುಳ್ಯ ಹಾಗು ಮೂಡಬಿದ್ರೆ ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಿದೆ.
ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ರೀತಿ ರಾಜೀಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುತ್ತದೆ ಹಾಗೂ ಆದೇಶದ ವಿರುದ್ಧ ಮೇಲ್ಮನವಿ ಇರುವುದಿಲ್ಲ. ಕಡಿಮೆ ಖರ್ಚಿನಲ್ಲಿ ತ್ವರಿತ ಹಾಗೂ ಶಾಶ್ವತ ನ್ಯಾಯ ಪಡೆದುಕೊಂಡು ತಮ್ಮ ಸಮಯ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ.
ಉಚಿತ ಕಾನೂನು ಸಲಹೆಗಾಗಿ ಓಂಐSಂ-15100 ಗೆ ಕರೆ ಮಾಡಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles