24.9 C
Karnataka
Thursday, April 30, 2026

ಮಾ.10 : ತುಳು ಭವನದಲ್ಲಿ ವಿದ್ಯಾರ್ಥಿ ಕಲಾಸಿರಿ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಪರಿಷತ್ ಜಂಟಿಯಾಗಿ ‘ವಿದ್ಯಾರ್ಥಿ ಕಲಾಸಿರಿ’ ಕಾರ್ಯಕ್ರಮವನ್ನು ಮಾ.10ರಂದು ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಂಡಿದೆ.
ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನದ ಅಂಗವಾಗಿ ಆಯೋಜಿಸಲಾಗಿರುವ ‘ವಿದ್ಯಾರ್ಥಿ ಕಲಾಸಿರಿ’ ಕಾರ್ಯಕ್ರಮವನ್ನು ಮಂಗವಾರ ಬೆಳಿಗ್ಗೆ 10.00 ಗಂಟೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ ಅವರು ಉದ್ಘಾಟಿಸುವರು.
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಖ್ಯಾತ ನಟ ಸ್ವರಾಜ್ ಶೆಟ್ಟಿ ಹಾಗೂ ಖ್ಯಾತ ನಿರೂಪಕಿ ಸೌಜನ್ಯ ಹೆಗ್ಡೆ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು.
ವಿದ್ಯಾರ್ಥಿ ಕಲಾಸಿರಿ ಕಾರ್ಯಕ್ರಮದಲ್ಲಿ ತುಳುನಾಡ ಜನಪದ ನೃತ್ಯ, ತುಳು ಭಾವಗೀತೆ , ತುಳು ಭಾಷಣ, ತುಳು ಕಿರುನಾಟಕ, ತುಳುನಾಡ ಬದುಕಿನ ಚಿತ್ರರಚನಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಅವರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles