ಮ೦ಗಳೂರು: ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಅಕ್ರಮವಾಗಿ ಶೇಖರಿಸಿದ 4,175 ಲೀಟರ್ ಡೀಸೆಲ್ ಪತ್ತೆಯಾಗಿದೆ.
ಮಾಚ್‌೯ 9 ರಂದು ರಾತ್ರಿ, ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ ಕೆ ರವರಿಗೆ ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲ್ ನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ವೃತ್ತ ನಿರೀಕ್ಷರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳ ಜತೆ ಮಾಹಿತಿ ಬಂದ ಸ್ಥಳಕ್ಕೆ ತೆರಳಿ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಗಳು ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 5 ಕ್ಯಾನ್ ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ತುಂಬಿಸಿರುವುದು ಕಂಡುಬಂದಿರುತ್ತದೆ. ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್ ಗಳು ಹಾಗೂ ಖಾಲಿ ಕ್ಯಾನ್ ಮತ್ತು ಇತರೆ ಸೊತ್ತುಗಳು ಪತ್ತೆಯಾಗಿರುತ್ತದೆ.ಈ ಎಲ್ಲಾ ಸೊತ್ತುಗಳ ಅಂದಾಜು ಮೌಲ್ಯ ರೂ 3,50,000/-ಗಳಾಗಿದ್ದು, ಪ್ರಕರಣದ ಆರೋಪಿ ಜಗದೀಶ್ ಎಂಬಾತನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಇವುಗಳನ್ನು ಯಾವುದೇ ಪರವಾನಿಗೆ ಹೊಂದದೇ ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಡೀಸೆಲ್ ಶೇಖರಿಸಿಟ್ಟಿರುವುದು ತಿಳಿದುಬಂದಿರುತ್ತದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


