ಮಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರವನ್ನು ಶನಿವಾರ ಉದ್ಘಾಟಿಸಲಾಯಿತು.
ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಸಿ.ಎಸ್.ಆರ್ ಅನುದಾನದಲ್ಲಿ ಜಿಲ್ಲಾ ಮಹಿಳಾ ಸಂಪನ್ಮೂಲ ಕೇಂದ್ರವನ್ನು ಎಲ್ಲಾ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಲಾಗಿದ್ದು, ಮಹಿಳಾ ದಿನಾಚರಣೆಯನ್ನು ಆಚರಿಸುವ ಮೂಲಕ ಲೋಕಾರ್ಪಣೆ ಮಾಡಲಾಯಿತು.
ಮುತ್ತೂಟ್ ಫೈನಾನ್ಸ್, ಪ್ರಾದೇಶಿಕ ವ್ಯವಸ್ಥಾಪಕ ಪ್ರಶಾಂತ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ.,
ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಸಿ.ಎಸ್. ಆರ್ ಮ್ಯಾನೇಜರ್ ಪ್ರಸಾದ್ ಕುಮಾರ್ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮುತೂಟ್ ಫೈನಾನ್ಸ್ ಪಿವಿಎಸ್ ಶಾಖೆಯ ಶಾಖಾ ವ್ಯವಸ್ಥಾಪಕಿ ಗಾಯತ್ರಿ ನಾಯಕ್ ಮತ್ತು ಸಖಿ ಒನ್ ಸ್ಟಾಪ್ ಸೆಂಟರ್‍ನ ಆಡಳಿತಾಧಿಕಾರಿ ಪ್ರಿಯ ಮಾತನಾಡಿದರು. ಮುತ್ತೂಟ್ ಫೈನಾನ್ಸ್ ವಲಯ ವ್ಯವಸ್ಥಾಪಕ ಸಂದೇಶ್ ಶೆಣೈ, ಶಾಖಾ ವ್ಯವಸ್ಥಾಪಕ ಚಂದ್ರಶೇಖರ್ ಯು, ವಿಜಿಲನ್ಸ್ ಆಫೀಸರ್ ತಾರನಾಥ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಮಹಿಳಾ ಅಭಿವೃದ್ದಿ ನಿಗಮದ ಅಭಿವೃದ್ದಿ ನಿರೀಕ್ಷಕಿ ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 8 ಮಕ್ಕಳಿಗೆ ಹೊಯ್ಸಳ ಕೆಳದಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.


