ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ವೃತ್ತಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಅಥವಾ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್ ವೃತ್ತಿಯನ್ನು ಆಯ್ಕೆ ಮಾಡಬಹುದು. ಐಟಿಐ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್, ಎಲೆಕ್ಟ್ರೀಶಿಯನ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೋಟಾರ್ ವೆಹಿಕಲ್ ಬಾಡಿ ಬಿಲ್ಡರ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ಮೆಷಿನಿಷ್ಟ್ ಹಾಗೂ ಪ್ರೋಗ್ರಾಮಿಂಗ್ ಆ್ಯಂಡ್ ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳನ್ನು ಆಯ್ಕೆ ಮಾಡಲು ಅರ್ಹರಾಗಿರುತ್ತಾರೆ.
ಅರ್ಹ ಅಭ್ಯರ್ಥಿಗಳು www.apprenticeshipindia.org ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಯ ಅವಧಿ ಐಟಿಐ ಅಭ್ಯರ್ಥಿಗಳಿಗೆ 1 ವರ್ಷ, ಎಸ್.ಎಸ್.ಎಲ್.ಸಿ ಅಭ್ಯರ್ಥಿಗಳಿಗೆ 2 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸೈನಿಕರ ಮಕ್ಕಳಿಗೆ ನಿಯಮದ ಅನ್ವಯ ಮೀಸಲಾತಿ ನೀಡಲಾಗುವುದು ಎಂದು ನಿಗಮದ ಹಿರಿಯ ವಿಭಾಗೀಯ ನಿಯಂತ್ರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.