ಬಂಟ್ವಾಳ : 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬ೦ಧಿಸಿದ್ದಾರೆ. ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಅಬುಸಾಲಿ (41) ಬ೦ಧಿತ ಆರೋಪಿ.
ಪ್ರಕರಣವೊ೦ದರಲ್ಲಿ ಆರೋಪಿಯಾಗಿದ್ದ ಅಬುಸಾಲಿ 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಮತ್ತು ಸಿಬ್ಬ೦ದಿ ರಾಜೇಶ್ ಎಸ್ .ಹಾಗೂ ಗಣೇಶ್ ಅವರ ತಂಡ ಬ೦ಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.