ಮಂಗಳೂರು: 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗು ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗಸ್ಟ್ 22 ರಿಂದ ಅಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ಆಯೋಜಿಸಿದ್ದಾರೆ.
ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಇ-ಮೇಲ್ ಮೂಲಕ ಕಳುಹಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಮತ್ತು ಚಿಕ್ಕಮಂಗಳೂರು ಜಿಲ್ಲೆಯ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿರುತ್ತದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.