25.5 C
Karnataka
Saturday, November 16, 2024

ಆಕಾಶಭವನ ಶರಣ್ ಬ೦ಧನ,ಕಾಲಿಗೆ ಗು೦ಡೇಟು

ಮ೦ಗಳೂರು: ಕುಖ್ಯಾತ ರೌಡಿ ಆಕಾಶಭವನ ಶರಣ್ ನನ್ನು ಮ೦ಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಬ೦ಧನದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದಾಗ ಆತನ ಕಾಲಿಗೆ ಫೈರಿಂಗ್ ಮಾಡಿದ್ದು ಗು೦ಡೇಟುನಿ೦ದ ಗಾಯಗೊ೦ಡಿರುವ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ರೋಹಿದಾಸ್ ಕೆ @ಶರಣ್ @ ಶರಣ್ ಪೂಜಾರಿ @ ಶರಣ್ ಆಕಾಶಭವನ ಸುಳ್ಯ ಕೆ.ವಿ.ಜಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಯಾಗಿದ್ದ ರಾಮಕೃಷ್ಣ ಎಂಬವರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ. ಇದಲ್ಲದೆ ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ದರೋಢೆ, ಅತ್ಯಾಚಾರ ಹಫ್ತಾ ವಸೂಲಿ ಹಾಗೂ ಫೋಕ್ಸೋ ಸೇರಿದಂತೆ ಸುಮಾರು 25 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ಹಲವು ಪ್ರಕರಣಗಳಲ್ಲಿ ದಸ್ತಗಿರಿ ವಾರಂಟ್ ಇದ್ದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಬಗ್ಗೆ ಪೊಲೀಸ್ ಆಯುಕ್ತರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ಸಿಸಿಬಿ ಘಟಕದ ತಂಡ ರಚಿಸಿದ್ದರು.

ಅದರಂತೆ ಆರೋಪಿ ಪತ್ತೆ ಬಗ್ಗೆ ಕಾರ್ಯಾಚರಣೆಗಿಳಿದ ಸಿಸಿಬಿ ಘಟಕದ ಪಿಎಸ್ಐ ಸುದೀಪ್ ಮತ್ತು ಪಿಎಸ್ಐ ಶರಣಪ್ಪ ಹಾಗೂ ಸಿಬ್ಬಂದಿಗಳ ತಂಡ ಸುಮಾರು 20 ದಿನಗಳಿಂದ ಕಾರ್ಯಾಚರಣೆ ನಡೆಸಿರುತ್ತದೆ. ಆರೋಪಿಗೆ ಆಶ್ರಯ ನೀಡಿದ ಹಾಗೂ ಆತನಿಗೆ ತಪ್ಪಿಸಿಕೊಳ್ಳಲು ಸಹಕರಿಸಿದ ಆರೋಪದ ಮೇಲೆ ಮಂಗಳೂರಿನ ಬೇರೆ ಬೇರೆ ಠಾಣೆಗಳಲ್ಲಿ 7 ಜನರ ಮೇಲೆ ಒಟ್ಟು5 ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿರುತ್ತವೆ.
ಜ.2 ರಂದು ಆರೋಪಿಯು ಮಂಗಳೂರಿನಲ್ಲಿ ಬಿಳಿ ಬಣ್ಣದ ಸ್ವಿಪ್ಟ್ ಕಾರಿನಲ್ಲಿ ತಿರುಗಾಡುತ್ತಿದ್ದಾನೆ ಎಂಬ ಮಾಹಿತಿ ಮೇರೆಗೆ ಆರೋಪಿಯ ಪತ್ತೆಯ ಬಗ್ಗೆ ತೆರಳಿದ್ದ ಪಿಎಸ್ಐ ಸುದೀಪ್ ಹಾಗೂ ತಂಡದವರ ಮೇಲೆ ಮೇರಿಹಿಲ್ ಬಳಿ ಕಾರನ್ನು ಹಾಯಿಸಿ ಕೊಲೆ ಮಾಡಲು ಪ್ರಯತ್ನಪಟ್ಟ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
ಆರೋಪಿ ಜ.9 ರಂದು ಉಡುಪಿಯಲ್ಲಿದ್ದಾನೆಂದು ದೊರೆತ ಖಚಿತ ಮಾಹಿತಿ ಮೇರೆಗೆ ಆತನ ಪತ್ತೆಯ ಬಗ್ಗೆ ಸಿಸಿಬಿ ಘಟಕದ ತಂಡ ಉಡುಪಿಯಲ್ಲಿ ಬೀಡು ಬಿಟ್ಟಿತ್ತು. ಅಲ್ಲಿ ಆತನ ಪತ್ತೆಯ ಬಗ್ಗೆ ಪ್ರಯತ್ನದಲ್ಲಿರುವಾಗ ಆತನು ಬಿಳಿ ಬಣ್ಣದ ಐ20 ಕಾರಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದಾನೆಂದು ಮಾಹಿತಿ ತಿಳಿದು ಸಿಸಿಬಿ ಘಟಕದ ವಿಶೇಷ ತಂಡದವರು ಆರೋಪಿಯನ್ನು ಹಿಂಬಾಲಿಸುತ್ತಾ ಮಂಗಳೂರು ಕಡೆಗೆ ಬಂದಿದ್ದರು. ಆರೋಪಿ ಮಂಗಳೂರು ಕಡೆಗೆ ಬಂದು ತನ್ನ ಕಾರಿನಲ್ಲಿ ಜಪ್ಪಿನಮೊಗರು ಕುಡುಪ್ಪಾಡಿ ಎಂಬಲ್ಲಿ ಇದ್ದಾನೆಂದು ಮಾಹಿತಿ ಹಿನ್ನಲೆಯಲ್ಲಿ ಅಲ್ಲಿಗೆ ಸಿಸಿಬಿ ತಂಡ ಹೋಗಿತ್ತು. ಆತನು ಸಿಸಿಬಿ ತಂಡವನ್ನು ನೋಡಿದ ಕೂಡಲೇ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಲು ಪ್ರಯತ್ನ ನಡೆಸಿದ ಸಮಯ ಕಾರನ್ನು ಅಡ್ಡಹಾಕಿ ಆತನನ್ನು ಸುತ್ತುವರೆದಾಗ ತನ್ನಲ್ಲಿದ್ದ ಚೂರಿಯಿಂದ ಹಲ್ಲೆ ಮಾಡಿ, ಕೊಲೆ ಮಾಡಲು ಪ್ರಯತ್ನಿಸಿದ. ಆತನನ್ನು ಹಿಡಿಯಲು ಹೋದ ಸಿಬ್ಬಂದಿ ಪ್ರಕಾಶ್ ಅವರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದ., ಆ ಸಂದರ್ಭ ಪಿಎಸ್ಐ ಸುದೀಪ್ ಅವರು ಆರೋಪಿಗೆ ಶರಣಾಗುವಂತೆ ಸೂಚಿಸಿದ್ದರೂ ಹಲ್ಲೆಗೆ ಮುಂದಾದಾಗ ಆತ್ಮ ರಕ್ಷಣೆಗಾಗಿ ಆತನ ಕಾಲಿಗೆ ಫೈರಿಂಗ್ ಮಾಡಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles