17.9 C
Karnataka
Saturday, November 23, 2024

ಜೂನ್ 7 – 8: `ಆಳ್ವಾಸ್ ಪ್ರಗತಿ -2024’ ಬೃಹತ್ ಉದ್ಯೋಗ ಮೇಳ

1

ಮ೦ಗಳೂರು: ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಈ ಬಾರಿ 14ನೇ ಆವೃತ್ತಿಯದ್ದಾಗಿದ್ದು, ಜೂನ್ 7 ಹಾಗೂ 8ರಂದು ಮೂಡುಬಿದಿರೆ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ.
ಬ್ಯಾಂಕಿ೦ಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿ೦ಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ ಎ೦ದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ, ವಿವೇಕ್ ಆಳ್ವ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಉಚಿತ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ ಆಳ್ವಾಸ್ ಸಂಸ್ಥೆಯ ಪರಿಣತ ತಂಡದಿ೦ದ `ಆಳ್ವಾಸ್ ಪ್ರಗತಿ’ಯಲ್ಲಿ ಉದ್ಯೋಗ ನೀಡುವ ಕಂಪೆನಿಗಳ ಮಾಹಿತಿ, ಸಂದರ್ಶನಾ ಕೌಶಲ್ಯಗಳ ತರಬೇತಿಯನ್ನು ವಿವಿಧ ಕಡೆಗಳಲ್ಲಿ ನೀಡಲಾಗುವುದು. 200ಕ್ಕೂ ಅಧಿಕ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇರುವುದರಿಂದ ವಿವಿಧ ಕಾಲೇಜುಗಳ ಪ್ರಾಂಶುಪಾಲರಿಗೆ ಮುಂಚಿತವಾಗಿ ತಿಳಿಸಿ, ಅಲ್ಲಿನ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉತ್ತೇಜಿಸಲಾಗುತ್ತಿದೆ.
ಉತ್ತಮ ಉದ್ಯೋಗಾವಕಾಶಗಳು
ಆಳ್ವಾಸ್ ಪ್ರಗತಿಗೆ ಈವರೆಗೆ 60 ಕಂಪನಿಗಳು ನೋಂದಾಯಿಸಿಕೊ೦ಡಿದ್ದು ಮತ್ತು ಹೆಚ್ಚುವರಿಯಾಗಿ 137 ಕಂಪನಿಗಳು ಪಾಲ್ಗೊಳ್ಳುವ ಭರವಸೆ ನೀಡಿವೆ. ಒಟ್ಟು 200ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ.
ಎಂಬಿಎ, ಎಂ.ಕಾA, ಬಿ.ಕಾಂ, ಬಿಬಿಎ, ಬಿಎಸ್ಸಿ, ಬಿಎ, ಬಿಸಿಎ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರಿಗೆ ಹೈದರಬಾದ್‌ನ ಫ್ಯಾಕ್ಟ್ಸೆಟ್ ಸಂಸ್ಥೆ, ಇಎಕ್ಸ್ಎಲ್ ಸರ್ವೀಸ್, ಮಹೀಂದ್ರಾ ಫಿನಾನ್ಸ್, ಪ್ರತಿಷ್ಠಿತ ಬ್ಯಾಂಕ್‌ಗಳಾದ ಎಚ್‌ಡಿಎಫ್‌ಸಿ, ಆ್ಯಕ್ಸಿಸ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಬಂಧನ್ ಬ್ಯಾಂಕ್ ಹಾಗೂ ಇನ್ನಿತರ ಸಂಸ್ಥೆಗಳು ಬಹುಅವಕಾಶಗಳನ್ನು ನೀಡಲಿವೆ. ಉತ್ಪಾದನಾ ವಲಯದಲ್ಲಿ ಕಿರ್ಲೋಸ್ಕರ್ ಟೊಯೋಟಾ ಟೆಕ್ಸಟೈಲ್ ಮೆಷಿನರಿ, ಉಷಾ ಆರ್ಮರ್ ಮುಂತಾದ ಕಂಪೆನಿಗಳು ಭಾಗವಹಿಸಲಿವೆ. ಐಟಿ ವಲಯದಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ದಿಯಾ ಸಿಸ್ಟಮ್ಸ್, 24*7ಚಿi, ಕಾನ್ಸೆಂಟ್ರಿಕ್ಸ್, ವಿನ್‌ಮ್ಯಾನ್ ಸಾಫ್ಟ್ವೇರ್ ಕಂಪೆನಿಗಳು ಯಾವುದೇ ಹಿನ್ನಲೆಯ ಪದವೀಧರರನ್ನು ನೇಮಿಸಿಕೊಳ್ಳಲಿವೆ.
ಮಾರಾಟ ವಲಯದಲ್ಲಿ ಕಲ್ಟ್ಫಿಟ್, ಐಟಿಸಿ ಲಿಮಿಟೆಡ್, ಬ್ಲೂಸ್ಟೋನ್ ಜ್ಯುವೆಲ್ಲರಿಗಳು ಪದವೀಧರರಿಗೆ ಉದ್ಯೋಗ ನೀಡಲಿವೆ. ಅಜಾಕ್ಸ್ ಇಂಜಿನಿಯರಿ೦ಗ್ ಪ್ರೈವೇಟ್ ಲಿಮಿಟೆಡ್, ಬುಹ್ಲರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ನೆಕ್ಸ್ಟೀರ್ ಆಟೋಮೋಟಿವ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ವಂಡರ್ಲಾ ಹಾಲಿಡೇಸ್‌ನಂತಹ ಕಂಪೆನಿಗಳು ಮೆಕ್ಯಾನಿಕಲ್ ಇಂಜಿನಿಯರ್‌ಗಳಿಗೆ 50ಕ್ಕೂ ಹೆಚ್ಚಿನ ಉದ್ಯೋಗಾವಕಾಶ ನೀಡಲಿವೆ. ವೋಲ್ವೋಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಹಿಳಾ ಮೆಕ್ಯಾನಿಕಲ್ ಪದವೀಧರರಿಗೆ ಉದ್ಯೋಗ ನೀಡಲಿದೆ. ಆ್ಯಂಥಮ್ ಬಯೋ, ಹೈದರಾಬಾದ್‌ನ ಎಂಎಸ್‌ಎನ್ ಲ್ಯಾಬೋರೇಟರೀಸ್ ಹಾಗೂ ಹಿಟಿರೋ ಲ್ಯಾಬ್ಸ್ ಎಂಎಸ್ಸಿ ಹಾಗೂ ಬಿಎಸ್ಸಿ ಪದವೀಧರರಿಗೆ ಉದ್ಯೋಗ ಕಲ್ಪಿಸಲಿವೆ.
ಸನ್ಸೆರಾ ಇಂಜಿನಿಯರಿAಗ್ ಲಿಮಿಟೆಡ್., ಏರೋಸ್ಪೇಸ್ ಡಿವಿಶನ್, ಸೆರಾಟಿಜಿಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮೆಷಿನರಿ ಪ್ರೈ ಲಿಮಿಟೆಡ್, ವೋಲ್ವೋ ಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಸುಂದರ೦ ಆಟೋ ಕಾಂಪೊನೆ೦ಟ್ಸ್ ಲಿಮಿಟೆಡ್, ಹಿಮಾಲಯ ವೆಲ್ನೆಸ್, ಮಾಂಡೋವಿ ಮೋಟಾರ್ಸ್, ಪ್ರಥಮ್ ಮೋಟಾರ್ಸ್, ಅರವಿಂದ್ ಮೋಟಾರ್ಸ್, ಸುಪ್ರೀಮ್ ಆಟೋ ಮತ್ತು ಇನ್ನೂ ಅನೇಕ ಕಂಪೆನಿಗಳು ಐಟಿಐ ಹಾಗೂ ಡಿಪ್ಲೊಮೋ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲಿವೆ. ನರ್ಸಿಂಗ್ ಪದವೀಧರ ಅಭ್ಯರ್ಥಿಗಳಿಗೆ ಪ್ರಮುಖ ಆಸ್ಪತ್ರೆಗಳಾದ ಹಿರಾನಂದನಿ ಆಸ್ಪತ್ರೆ, ಮುಂಬೈಯ ಅಪೊಲೊ ಆಸ್ಪತ್ರೆ, ಕೆಎಂಸಿ ಆಸ್ಪತ್ರೆ ಹಾಗೂ ಇನ್ನಿತರ ವೈದ್ಯಕೀಯ ಸಂಸ್ಥೆಗಳು ಉದ್ಯೋಗ ನೀಡಲಿವೆ ಎ೦ದು ವಿವೇಕ್ ಆಳ್ವ ವಿವರಿಸಿದರು.

ವಿಶೇಷ ಸೂಚನೆ:
ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಜೂನ್ 6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಐಟಿಐ ಅಭ್ಯರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಲಾಗುವುದು
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9008907716, 9663190590, 7975223865, 9741440490,ಕಂಪೆನಿಗಳ ನೊಂದಾವಣೆ ಹಾಗೂ ಇತರ ಮಾಹಿತಿಗೆ: 8971250414 ಸ೦ಪಕಿ೯ಸಬಹುದು.

ಅಭ್ಯರ್ಥಿಗಳು ಲಗತ್ತಿಸಬೇಕಾದ ಅಗತ್ಯ ದಾಖಲಾತಿಗಳು:
 5-10 ಪಾಸ್‌ಪೋರ್ಟ್ ಭಾವಚಿತ್ರಗಳು
 ಸಂಪೂರ್ಣ ಶೈಕ್ಷಣಿಕ ಮಾಹಿತಿಗಳನ್ನೊಳಗೊಂಡ ರೆಸ್ಯೂಮೆ
 ಅಂಕ ಪಟ್ಟಿಗಳು (ನೆರಳಚ್ಚು ಪ್ರತಿಗಳು -ಜೆರಾಕ್ಸ್)
 ಆನ್‌ಲೈನ್ ರಿಜಿಸ್ಟ್ರೇಶನ್‌ ನಂಬರ್/ಐಡಿ
 ಅಭ್ಯರ್ಥಿಗಳು ಉದ್ಯೋಗ ಮೇಳದಂದು ಬೆಳಿಗ್ಗೆ 8 ಗಂಟೆಗೆ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಹಾಜರಿರಬೇಕು

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles