17.5 C
Karnataka
Friday, November 22, 2024

ಡಿ.14-17 : ಆಳ್ವಾಸ್ ವಿರಾಸತ್; ‘ಸಪ್ತ ಮೇಳ’ಗಳ ಮೆರುಗು

ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಆಳ್ವಾಸ್ ವಿರಾಸತ್-23’ಕ್ಕೆ ‘ಸಪ್ತ ಮೇಳ’ಗಳ ಮೆರುಗಿನ ಜೊತೆ ವೀರಯೋದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಈ ಬಾರಿಯ ವಿರಾಸತ್ ಅರ್ಪಣೆ ಮಾಡ ಲಾಗಿದೆ ಎಂದು ಪ್ರತಿಷ್ಟಾನದ ಅಧ್ಯಕ್ಷ ಮೋಹನ್ ಆಳ್ವ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ತಿಳಿಸಿದ್ದಾರೆ.
29ನೇ ವರ್ಷದ ‘ಆಳ್ವಾಸ್ ವಿರಾಸತ್ ಧರ್ಮಸ್ಥಳದ ಧರ್ಮಾಧಿಕಾರಿ යි. ವೀರೇಂದ್ರ ಹೆಗ್ಗಡೆ ಆಶೀರ್ವಾದ ದಲ್ಲಿ ನಡೆಯಲಿದೆ .ಮೊದಲ ದಿನವಾದ ಡಿ.14ರಂದು ಸಂಜೆ 5.30ಕ್ಕೆ ರಾಜ್ಯಪಾಲರಿಗೆ ಗೌರವ ರಕ್ಷೆ ನಡೆಯಲಿದೆ. ಬಳಿಕ 5.45ಕ್ಕೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹೋಟ್ ವಿರಾಸತ್ ಉದ್ಘಾಟಿಸುವರು. ಸಂಜೆ 6:35ಕ್ಕೆ ಆಳ್ವಾಸ್ ವಿರಾಸತ್‌ನ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. 100ಕ್ಕಿಂತಲೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳ 3 ಸಾವಿರಕ್ಕೂ ಅಧಿಕ ಕಲಾವಿದರಿಂದ ವೈವಿಧ್ಯಮಯ ಸಾಂಸ್ಕೃತಿಕ ಮೆರವಣಿಗೆ, ಬಳಿಕ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ ನಡೆಯಲಿದೆ. ಡಿ.15ರಂದು ಸಂಜೆ 6 ರಿಂದ 8ರ ವರೆಗೆ ಚಲನಚಿತ್ರ ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಲ್ ಅವರಿಂದ ‘ಗಾನ ವೈಭವ’ ಇರಲಿದೆ.ಡಿ. 16ರಂದು ಚಲನಚಿತ್ರ ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಅವರಿಂದ ‘ಭಾವ ಲಹರಿ’ ನಡೆಯಲಿದೆ.ಎರಡೂ ದಿನಗಳೂ ಸಂಜೆ 5:45ಕ್ಕೆ ದ್ವೀಪ ಪ್ರಜ್ವಲನ ಹಾಗೂ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ಇರಲಿದೆ ಎ೦ದವರು ತಿಳಿಸಿದರು..
ಡಿ.17ರಂದು ಸಂಜೆ 5:15ರಂದು ಆಳ್ವಾಸ್ ವಿರಾಸತ್-2023 ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಬಾರಿ ಡಾ. ಮೈಸೂರು ಮಂಜುನಾಥ್, ಡಾ. ಪ್ರವೀಣ್ ಗೋಡ್ಕಿಂಡಿ ಹಾಗೂ ವಿಜಯ ಪ್ರಕಾಶ್ ಅವರಿಗೆ ಪ್ರದಾನ ಮಾಡಲಾಗುವುದು.
ಬಳಿಕ ಸಂಜೆ 6:30ಕ್ಕೆ ಡಾ. ಮೈಸೂರು ಮಂಜುನಾಥ್ ಮತ್ತು ಡಾ.ಪ್ರವೀಣ್ ಗೋಡ್ಕಿಂಡಿ ಮತ್ತು ವಿಜಯ ಪ್ರಕಾಶ್ ಅವರಿಂದ ‘ತಾಳ-ವಾದ್ಯ- ಸಂಗೀತ’ ನಡೆಯಲಿದೆ. ರಾತ್ರಿ 7:30ಕ್ಕೆ ಚಲನಚಿತ್ರ ಖ್ಯಾತ ಹಿನ್ನೆಲೆಗಾಯಕ ವಿಜಯಪ್ರಕಾಶ್ ಅವರಿಂದ ಸಂಗೀತ ರಸ ಸಂಜೆ ನಡೆಯಲಿದೆ. 9.30ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಇರಲಿದೆ.
ಈ ಬಾರಿಯ ಆಳ್ವಾಸ್ ವಿರಾಸತ್‌ನಲ್ಲಿ ಬೆಳಿಗ್ಗೆ 9ರಿಂದ ರಾತ್ರಿ 10 ಗಂಟೆಯವರೆಗೆ ಅನ್ವೇಷಣಾತ್ಮಕ ಕೃಷಿಕ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿಸಿರಿ) ಆವರಣದಲ್ಲಿ ನಡೆಯುವ 7 ಮೇಳಗಳ 750ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ಪ್ರದರ್ಶನ ಮತ್ತು ಮಾರಾಟ ಮೇಳವು ವಿಶೇಷ ಆಕರ್ಷಣೆ ಯಾಗಿದೆ.ಕೃಷಿ ಮೇಳದಲ್ಲಿ ಹಣ್ಣು ತರಕಾರಿ, ಬೀಜಗಳು, ನರ್ಸರಿಗಳು, ಸಾವಯವ ಹಾಗೂ ರಾಸಾಯನಿಕ ಗೊಬ್ಬರಗಳು, ನೀರು ನೆಲಗಳಲ್ಲಿಬೆಳೆಯುವ ವಿವಿಧ ಸಸ್ಯ ಪ್ರಭೇದಗಳು, ಕೃಷಿ ಉಪಕರಣ- ಯಂತ್ರಗಳ ಪ್ರದರ್ಶನಮತ್ತು ಮಾರಾಟ ಮಳಿಗೆಗಳು ಇರಲಿವೆ. ವಿವಿಧ ಕೃಷಿ ಸಸ್ಯ ಪ್ರಭೇದಗಳ ಬೀಜ, ಅವುಗಳನ್ನು ಬೆಳೆಸಲು ಬೇಕಾದ ಯಂತ್ರ-ತಾಂತ್ರಿಕ ಸಲಕರಣೆಗಳು, ಕೃಷಿ ಉತ್ಪನ್ನಗಳು ಈ ಬಾರಿಯ ವಿಶೇಷ ಆಕರ್ಷಣೆಯಾಗಿರಲಿದೆ.ಆಹಾರ ಮೇಳದಲ್ಲಿ ಹೊಟ್ಟೆಗೆ ಹಿಟ್ಟು ಮಾತ್ರವಲ್ಲ, ಕಣ್ಣಿಗೆ ಸೌಂದರ್ಯ, ನಾಸಿಕಕ್ಕೆಕಂಪು, ಬಾಯಲ್ಲಿ ನೀರೂರಿಸುವ ರುಚಿಗಳಿವೆ. ತುಳುನಾಡಿನ ಪರಂಪರೆಯಿಂದ
ಹಿಡಿದು, ಅಪ್ಪಟ ದೇಸೀಯ ತಿನಿಸು, ಇಂದಿನ ಫಾಸ್ಟ್‌ಫುಡ್ ವರೆಗಿನ ಆಹಾರ ವೈವಿಧ್ಯಗಳು ಲಭ್ಯ. ನಾಲಗೆಯಲ್ಲಿ ಖಾರ, ಹುಳಿ, ಉಪ್ಪು, ಸಿಹಿ…ಗಳ ಸಂಗಮ. ವಿಭಿನ್ನ ಆಹಾರ ಹಾಗೂ ಆಹಾರೋತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವೂ
ಇದೆ. ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ:ನಮ್ಮ ಸಂಸ್ಕೃತಿ ಮತ್ತು ಪರಂಪರೆಯು ಅಮೂರ್ತ ಹಾಗೂ ಮೂರ್ತ ರೂಪದಲ್ಲಿಹಾಸು ಹೊಕ್ಕಾಗಿರುತ್ತದೆ ಎ೦ದವರು ವಿವರಿಸಿದರು. ಪ್ರಸಾದ್ ಶೆಟ್ಟಿ ಉಪಸ್ಥತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles