19.6 C
Karnataka
Thursday, December 5, 2024

ಡಿ.10 ರಿಂದ ಆಳ್ವಾಸ್ ವಿರಾಸತ್: ಸಂಸ್ಕೃತಿ, ಮೇಳಗಳ ಮಹಾ ಅನಾವರಣ

ಮ೦ಗಳೂರು: ಆಳ್ವಾಸ್ ಶಿಕ್ಷಣದ ಪ್ರತಿಷ್ಠಾನ ಆಯೋಜಿಸುವ 30ನೇ ವರ್ಷದ ವಿರಾಸತ್’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವು ವೈಶಿಷ್ಟ್ಯಪೂರ್ಣ ಮೇಳಗಳ ಜೊತೆಗೆ ಡಿ.10ರಿಂದ 15ರ ವರೆಗೆ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.

30ನೇ ವರ್ಷದ ವಿರಾಸತ್ ಬಹಳ ಮಹತ್ವಪೂರ್ಣವಾಗಿದ್ದು, ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ವೈಶಿಷ್ಟ್ಯಪೂರ್ಣಗೊಳಿಸಲಾಗಿದೆ. ಸಾಂಸ್ಕೃತಿಕ ವೈಭವದ ಜೊತೆಗಿನ ಮೇಳಗಳು, ಕಲಿಕೆ ಹಾಗೂ ಜೀವನೋಲ್ಲಾಸದ ಸೆಲೆಗಳಾಗಿವೆ. ಈ ಬಾರಿ ಸಾಂಘಿಕ ಪ್ರದರ್ಶನಗಳಿಗೆ ಒತ್ತು ನೀಡಲಾಗಿದ್ದು, ವಿವಿಧತೆಯಲ್ಲಿ ಏಕತೆಯ ಅಭಿವ್ಯಕ್ತಿಯಾಗಲಿದೆ. ಡಿ.10ರಿಂದ ಡಿ.14ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೇಳಗಳಿದ್ದರೆ, ಡಿ.15ರಂದು ಸಂಪೂರ್ಣವಾಗಿ ಮೇಳ ಹಾಗೂ ಪ್ರದರ್ಶನಗಳಿಗೆ ಮೀಸಲಿಡಲಾಗಿದೆ. ಪ್ರವೇಶ ಸಂಪೂರ್ಣ ಉಚಿತವಾಗಿದೆ ಎ೦ದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎ೦.ಮೋಹನ ಆಳ್ವ ಅವರು ಬುಧವಾರ ಪತ್ರಿಕಾಡೋಷ್ಠಿಯಲ್ಲಿ ತಿಳಿಸಿದರು.

ಡಿ.10, ಮಂಗಳವಾರ-ಉದ್ಘಾಟನೆ:

ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಡಿ.10ರ ಮಂಗಳವಾರ ಸಂಜೆ 5.30ರಿಂದ 6.30ರ ವರೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟಿಸುವರು. ಉಡುಪಿಯ ಜಿ. ಶಂಕರ್ ಫಾ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್ ಅಧ್ಯಕ್ಷತೆ ವಹಿಸುವರು. ಸಂಸದ ಕ್ಯಾ. ಚೌಟ, ಶಾಸಕ ಉಮಾನಾಥ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ, ಮಂಗಳೂರು ಪೊಲೀಸ್ ಆಯುಕ್ತಅನುಪಮ್‌ ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಬಿ.ಎಲ್.‌ ಶಂಕರ್ ,ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾ‌ರ್, ಎಂ.ಜಿ.ಆರ್. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಅದಾನಿ ಗ್ರೂಪ್ ಕಾಯರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಬರೋಡ ಶಶಿ ಕೇಟರಿಂಗ್ ಸರ್ವೀಸಸ್ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ, ಬೆಂಗಳೂರು ಕೆ.ಎನಲ್.ಎನ್. ಎಂಜಿನಿಯರಿಂಗ್ ಆಡಳಿತ ನಿರ್ದೇಶಕ ಪ್ರಸನ್ನ ಕುಮಾರ್ ಶೆಟ್ಟಿ, ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್‌ಪೋರ್ಟ್ಸ್ನ ಎಂ.ರವೀಂದ್ರನಾಥ ಆಳ್ವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೂಡುಬಿದಿರೆ ಜಯಶ್ರೀ ಅಮರನಾಥ ಶೆಟ್ಟಿ, ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕು. ರಾಧಾ, ಮೂಡುಬಿದಿರೆ ಧನಲಕ್ಷ್ಮೀ ಕ್ಯಾಶೂಸ್ ಆಡಳಿತ ನಿರ್ದೇಶಕ ಕೆ. ಶ್ರೀಪತಿ ಭಟ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ.. ಮಂಗಳೂರು ಭಾರತ್ ಇನ್‌ಫ್ರಾಟೆಕ್‌ ನ ಮುಸ್ತಾಫ ಎಸ್.ಎಂ. ಮೂಡುಬಿದಿರೆ ಬಿಮಲ್ ಕನ್‌ಸ್ಟ್ರಕ್ಷನ್ಸ್ ಪ್ರವೀಣ್ ಕುಮಾರ್ ಉಪಸ್ಥಿತರಿರುವರು‌

ಭವ್ಯ ಸಾಂಸ್ಕೃತಿಕ ಮೆರವಣಿಗೆ:
ಸಂಜೆ 6.35ರಿಂದ ರಾತ್ರಿ 8.30ರ ವರೆಗೆ100ಕ್ಕಿಂತಲೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳಿಂದ 3000ಕ್ಕೂ ಮಿಕ್ಕಿದ ಕಲಾವಿದರನ್ನು ಒಳಗೊಂಡ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ
.

ಮಹಾಮೇಳಗಳು

ಕೈಮಗ್ಗ ಸೀರೆಗಳ ಉತ್ಸವ:ಭಾರತದ 30 ಪ್ರದೇಶಾವಾರು ಹಾಗೂ ಜಿಐ ಟ್ಯಾಗ್ ಹೊಂದಿರುವ ಕೈಮಗ್ಗ ಸೀರೆಗಳ ಹಾಗೂ ಬಟ್ಟೆಗಳ ಉತ್ಸವ ವಿರಾಸತ್‌ನ ಮಹಾಮೇಳಗಳಲ್ಲಿ ಈ ವರ್ಷದ ಪ್ರಮುಖ ಆಕರ್ಷಣೆಯಾಗಿದೆ. ಭಾರತೀಯ ಪರಂಪರೆಯನ್ನು ಬಿಂಬಿಸುವ ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ನೇಕಾರರಿಂದ ಗ್ರಾಹಕಕರಿಗೆ ನೇರ ಮರಾಟ ನಡೆಯಲಿದೆ.
ಇ೦ಡಿಯನ್‌ ಆಟಿ೯ಸನ್‌ ಬಝಾರ್‌,ಕೃಷಿಮೇಳ.ಆಹಾರ ಮೇಳ.ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದಶ೯ನ.ಫಲಪುಷ್ಪ ಮೇಳ,ಲಲಿತಾ ಕಲಾಮೇಳ ಮು೦ತಾದ ಮೇಳಗಳು ನಡೆಯಲಿವೆ ಎ೦ದವರು ವಿವರಿಸಿದರು.

ಪತ್ರಿಕಾದ್ಯೋಮ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಉಪಸ್ಥಿತರಿದ್ದರು.

Alvas Vrasat from Dec. 10: Grand unveiling of culture, fairs

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles