24.5 C
Karnataka
Thursday, April 30, 2026

ಶಿಕ್ಷಣಕ್ಕೆ ಅಂಗನವಾಡಿ ಭದ್ರ ಬುನಾದಿ: ಶಿವಾನಂದ ತಗಡೂರು

ಮಂಗಳೂರು : ಅಂಗನವಾಡಿ ಶಿಕ್ಷಣ ಎಳೆಯ ಮಕ್ಕಳ ಸಮಗ್ರ ಬೆಳವಣಿಗೆಗೆ ಭದ್ರ ಬುನಾದಿ ಹಾಕುತ್ತದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿ ಶಾಲಾ ಶಿಕ್ಷಣಕ್ಕೆ ಸಿದ್ಧಗೊಳಿಸುವ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರದ ಜತೆ ಸಾರ್ವಜನಿಕ ಸಹಭಾಗಿತ್ವವೂ ಅಗತ್ಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.
ನಗರದ ಬಿಜೈ ಅಂಗನವಾಡಿ ಕೇಂದ್ರದಲ್ಲಿ ಯುಗಾದಿ ಆಚರಣೆ ಅಂಗವಾಗಿ ಮಕ್ಕಳಿಗೆ ಸಿಹಿ ವಿತರಿಸಿ ಮಾತನಾಡಿದ ಅವರು ” ಮಕ್ಕಳನ್ನು ದೇಶದ ಆಸ್ತಿಯಾಗಿ ಬೆಳೆಸುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಕಾರ್ಯನಿರತಬಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಕಟ್ಟ, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಮ್ಯಾನೇಜರ್ ಅರುಣ್‌ಪ್ರಭ, ಉದ್ಯಮಿ ಆರ್.ಕೆ.ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ಬಿಜೈ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲೀನಾ ಗೋವಿಯಸ್, ಅಂಗನವಾಡಿಯ ಪ್ರಭಾರ ಶಿಕ್ಷಕಿ ಗಾಮಿನಿ, ಸಹಾಯಕಿ ಲಕ್ಷ್ಮಿ, ಆಶಾ ಕಾರ್ಯಕರ್ತೆ ಪ್ರಭಾ ಗಾಯತ್ರಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles