24.5 C
Karnataka
Thursday, April 30, 2026

ಅಂಗನವಾಡಿ ಕಾರ್ಯಕರ್ತೆ – ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ

ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 56 ಅಂಗನವಾಡಿ ಕಾರ್ಯಕರ್ತೆ ಹಾಗೂ 221 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ಲೈನ್‍ನಲ್ಲಿ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್ https:karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಮೊದಲ ಹಂತದಲ್ಲಿ ಆನ್‍ಲೈನ್ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಬೇಕು. ಎರಡನೇ ಹಂತದಲ್ಲಿ ಸಹಿ ಹಾಗೂ ಭಾವಚಿತ್ರವನ್ನು ಅಪ್‍ಲೋಡ್ ಮಾಡಬೇಕು. ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಮೂರನೇ ಹಂತದಲ್ಲಿ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ಅಪ್‍ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಬೆಳ್ತಂಗಡಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ 08256-295134, ಬಂಟ್ವಾಳ:08255-298562, ಮಂಗಳೂರು(ಗ್ರಾ):0824-2263199, ಮಂಗಳೂರು(ನ):0824-2959809, ಪುತ್ತೂರು: 08251-298788, ಸುಳ್ಯ:7795581349, ವಿಟ್ಲ:08255-238080 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles