35.3 C
Karnataka
Thursday, May 14, 2026

ಮೇ 17ರಂದು ದ.ಕ.-ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ವಾರ್ಷಿಕ ಸಮಾವೇಶ

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘ ಮಂಗಳೂರು ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ದ.ಕ. ಜಿಲ್ಲಾ ಶಾಖೆ ಹಾಗೂ ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಮೇ 17ರಂದು ಬೆಳಗ್ಗೆ 10ಕ್ಕೆ ವಿಶಿಷ್ಟ ಚೇತನರ ಸಂಘದ 34 ನೇ ವಾರ್ಷಿಕ ಸಮಾವೇಶ,ದಿವ್ಯಾಂಗರಿಗೆ ವೈದ್ಯಕೀಯ ನೆರವು, ವೈದ್ಯಕೀಯ ತಪಾಸಣೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ.
ರೆಡ್‌ಕ್ರಾಸ್ ದ.ಕ.ಜಿಲ್ಲಾ ಶಾಖೆಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿಟ್ಟೆ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಡಾ.ಎಂ. ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ದ.ಕ. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ, ಡಾ.ಕೆ.ಆರ್. ಕಾಮತ್, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಮನೀಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವಿಶಿಷ್ಟ ಚೇತನರ ಸಂಘದ ಅಧ್ಯಕ್ಷ ಡಾ.ವಿ. ಮುರಳೀಧರ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
……………..

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles