ಮಂಗಳೂರು:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023-24 ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ www.sevasindhu.karnataka.gov.inನಲ್ಲಿ ಡಿಸೆಂಬರ್ 13 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ www.kannadasiri.karnataka.gov.in ಹಾಗೂ ದೂರವಾಣಿ ಸಂಖ್ಯೆ 0824-2951327, 2451527 ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.