ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ನೀಡುವ “ಜನರಲ್ ಕೆ ಎಸ್ ತಿಮ್ಮಯ್ಯ” ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಂದ ಪಡೆಯಬೇಕು. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉರ್ವಾಸ್ಟೋರ್, ಮಂಗಳೂರು ಇಲ್ಲಿ ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.