ಮಂಗಳೂರು: ಬೊಂದೇಲ್ ನಲ್ಲಿರುವ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ ( ಇಂಗ್ಲೀಷ್ & ಕನ್ನಡ ) ಹಾಗೂ ಲೈಬ್ರರಿ ಅಂಡ್ ಇನ್ಪಾರ್ಮೇಷನ್ ಸೈನ್ಸ್ ಕೋರ್ಸುಗಳ ದಾಖಲಾತಿಗೆ ಎಸ್‍ಎಸ್‍ಎಲ್‍ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಮೇ. 14 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2482334, 9611320910 ಅಥವಾ 9844744845 ಸಂಪರ್ಕಿಸಬಹುದು ಎಂದು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.