24.9 C
Karnataka
Friday, November 15, 2024

ವಿವಿಧ ಸಂಸ್ಥೆಗಳಿಂದ: ಅರ್ಜಿ ಆಹ್ವಾನ

ಮಂಗಳೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷದ ಮತ್ತು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ 2024-25 ನೇ ಸಾಲಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ರಂತೆ ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುತ್ತದೆ.

ಅರ್ಹತೆಗಳು:ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಮೇ. 31 ರೊಳಗೆ ಅರ್ಜಿ ಸಲ್ಲಿಸಬಹುದು.

ದಿನಾಂಕ: 01-07-2024ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವರ್ಷ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿ ಗಳು 15 ರಿಂದ 25 ವರ್ಷ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಡೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.

ಡಿಪ್ಲೋಮಾ ಕೋರ್ಸ್ ಗೆ ಲಭ್ಯವಿರುವ ಸಂಸ್ಥೆಗಳು, ಗದಗ ಜಿಲ್ಲೆಯ, ಬೆಟಗೇರಿಯಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಗೆ 22 ಅಭ್ಯರ್ಥಿಗಳು. ತಮಿಳುನಾಡುವಿನ, ಸೇಲಂ ನಲ್ಲಿರುವ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಗೆ 17 ಅಭ್ಯರ್ಥಿಗಳು, ಆಂಧ್ರ ಪ್ರದೇಶದ, ನೆಲ್ಲೂರು ಜಿಲ್ಲೆಯ ವೆಂಕಟಗಿರಿಯಲ್ಲಿರುವ ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಗೆ 03 ಅಭ್ಯರ್ಥಿಗಳು. ಕೇರಳದ ಕಣ್ಣೂರು ನಲ್ಲಿರುವ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಗೆ 02 ಅಭ್ಯರ್ಥಿಗಳು, ಒಟ್ಟು 44 ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುತ್ತದೆ.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಫಾರಂಗಾಗಿ ಗದಗ ಜಿಲ್ಲೆಯ ಬೆಟಗೇರಿಯ ನರಸಾಪೂರ ದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪ್ರಾಂಶುಪಾಲರ ದೂರವಾಣಿ ಸಂ: 08372-297221 ಮೊಬೈಲ್ ಸಂಖ್ಯೆ: 9449162822 ಸಂಪರ್ಕಿಸಬಹುದು ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ: 9481628584/ 9449145293 ಸಂಪರ್ಕಿಸಿಬಹುದು ಹಾಗೂ hಣಣಠಿs://ಞhಣigಚಿಜಚಿg.ಚಿಛಿ.iಟಿ/ಂಜmissioಟಿಈoಡಿm.ಠಿಜಜಿ ಮೂಲಕ ಅರ್ಜಿ ಫಾರಂ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಗದಗ ಜಿಲ್ಲೆಯ ಬೆಟಗೇರಿಯ ನರಸಾಪೂರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಗೆ ಸಲ್ಲಿಸಬೇಕು. ಎಂದು ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles