ಮಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ 2024-2025ನೇ ಸಾಲಿಗೆ ನಗರದ ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್ಫೆÇೀರ್ಮೇಶನ್ ಸೈನ್ಸ್ ಕೋರ್ಸ್ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇವರನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಅರ್ಜಿ ಪಡೆಯಲು ಹಾಗೂ ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಜೂನ್ 15 ರಂದು ಕೊನೆಯ ದಿನ.ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2482334, 9611320910 ಹಾಗೂ 9844744845 ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.