ಮಂಗಳೂರು: 2024-2025ನೇ ಸಾಲಿನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಸಂಸ್ಥೆಯಲ್ಲಿ ವಿವಿಧ ಡಿಪ್ಲೋಮಾ ಕೋರ್ಸು ಸೇರಲು ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್ಫಾರ್ಮೇಶನ್ ಸೈನ್ಸ್ ಕೋರ್ಸ್ಗಳ ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ 2ನೇ ವರ್ಷ, 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ನ ಪ್ರವೇಶಕ್ಕೆ 2 ವರ್ಷಗಳ ಐ.ಟಿ.ಐ, ದ್ವಿತೀಯ ಪಿ.ಯು.ಸಿ(ವಿಜ್ಞಾನ), ದ್ವಿತೀಯ ಪಿ.ಯು.ಸಿ.(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಜೂನ್ 26 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ. ಸಂಖ್ಯೆ: 0824-2482334, 9611320910 ಹಾಗೂ 9844744845 ಸಂಪರ್ಕಿಸುವಂತೆ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.