ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಾಡು –ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು 2,000 ರೂ.ಮಾಶಾಸನವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿದಾರರಿಗೆ 58 ವರ್ಷ ಪೂರ್ಣಗೊಂಡಿರಬೇಕು. ಅರ್ಜಿದಾರರು 25 ವರ್ಷಗಳ ಕಾಲ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರಬೇಕು. ಸರ್ಕಾರದ ಯಾವುದೇ ಇತರೇ ಇಲಾಖೆಯ ಯೋಜನೆಗಳ ಫಲಾನುಭವಿಗಳಾಗಿರಬಾರದು. ಅರ್ಜಿದಾರರ ವಾರ್ಷಿಕ ಆದಾಯ ರೂ.1 ಲಕ್ಷದ ಮಿತಿಯಲ್ಲಿರಬೇಕು. ಆಸಕ್ತ ಅರ್ಹ ಕಲಾವಿದರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ಕಚೇರಿಗೆ ಭೇಟಿ ನೀಡಿ ಅರ್ಜಿ ಹಾಗೂ ಮಾಹಿತಿ ಪಡೆಯಬಹುದಾಗಿದೆ. ಹಾಗೂ ದೂರವಾಣಿ ಸಂಖ್ಯೆ: 0824-2951327 ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.