18.1 C
Karnataka
Tuesday, November 19, 2024

ವಿದ್ಯಾರ್ಥಿ ನಿಲಯಗಳ ಪ್ರವೇಶ: ಅರ್ಜಿ ಆಹ್ವಾನ

ಮಂಗಳೂರು:2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೆÇೀಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ.1 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ತಾರೆ ರೂ. 44,500/- ಹೊಂದಿರಬೇಕು.

ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ https://shp.karnataka.gov.in/bcwd ಮೂಲಕ ಆನ್‍ಲೈನ್‍ನಲ್ಲಿ  ಜುಲೈ 10 ರೊಳಗೆ ಅರ್ಜಿ ಸಲ್ಲಿಸಬೇಕು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ಮೂಲಕ ಪರಿಶೀಲಿಸಬೇಕು.  

  ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ  ಜಿಲ್ಲಾ, ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು. 
 ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8050770004, 8050770005 ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles