ಮಂಗಳೂರು: ಜಿಲ್ಲೆಯಲ್ಲಿ ಮೊರಾರ್ಜಿ ದೇಸಾಯಿ/ ಡಾ. ಬಿ. ಆರ್. ಅಂಬೇಡ್ಕರ್/ ಇಂದಿರಾ ಗಾಂಧಿ/ನಾರಾಯಣ ಗುರು ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 7 ಮತ್ತು 8ನೇತರಗತಿಯಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಉಳಿದಿರುವ ಶಾಲೆಗಳು :
ಮಂಗಳೂರಿನ ನೆಲ್ಲಿತೀರ್ಥ, ಗುರುಪುರ, ಮೂಡಬಿದ್ರೆಯ ಕಲ್ಲಬೆಟ್ಟು, ಮೂಲ್ಕಿಯ ಕಮ್ಮಾಜೆ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ,ಬಂಟ್ವಾಳದ ವಗ್ಗ. ಪುಂಜಾಲಕಟ್ಟೆ ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಶಾಲೆಗಳು
ಜಿಲ್ಲೆಯಲ್ಲಿ 7 ಮತ್ತು 8ನೇತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ 10ನೇತರಗತಿಯ ವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಯು ತನ್ನ ಎಸ್ಎಟಿಎಸ್ ಸಂಖ್ಯೆ, ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 20 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲಾ ಪ್ರಾಂಶುಪಾಲರನ್ನು ಸಂಪರ್ಕಿಸುವಂತೆ sಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.