ಮಂಗಳೂರು: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ (ಬಾಲಕರಿಗೆ ಮಾತ್ರ) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2023-24ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಸಾಮಾನ್ಯ ಅರ್ಹತೆಗಳು:
ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ-(ಪ್ರವರ್ಗ-1)ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1 ಲಕ್ಷಗಳು.
ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತೀ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45ರಷ್ಟು ಅಂಕಗಳÀನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) ಜುಲೈ 10, 2024 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 10 ಜುಲೈ 2004 ರಿಂದ 10 ಜುಲೈ 2007 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.
ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ-575004- ಇಲ್ಲಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್‍ಸೈಟ್ https://bcwd.karnataka.gov.inನಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 10 ರಂದು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2225078 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.