ಮಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ , ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ವೆಬ್ಸೈಟ್ ವಿಳಾಸ https://ssp.postmatric.karnataka.gov.in/ ಮೂಲಕ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ https://bcwd.karnataka.gov.in, ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ – 8050770005, ಇಮೇಲ್ postmatrichelp@karnataka.gov.in ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.