24 C
Karnataka
Friday, November 15, 2024

ಮತದಾನದ ಮಹತ್ವವನ್ನು ಯುವಜನತೆ ಅರಿಯಬೇಕು: ಪಿ.ಎಸ್ ವಸ್ತ್ರದ್

ಮಂಗಳೂರು, : ಯುವ ಮತದಾರರು ಮತದಾನದ ಮಹತ್ವವನ್ನು ಅರಿತುಕೊಂಡು ತಮ್ಮ ಮತವನ್ನು ಚಲಾಯಿಸಬೇಕು ಹಾಗೂ ಸಮಾಜದ ಇತರ ಜನರೂ ಮತದಾನದಲ್ಲಿ ಭಾಗವಹಿಸುವಂತೆ ಪ್ರೇರೇಪಣೆ ಮಾಡಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ತಾಲ್ಲೂಕು ಪಂಚಾಯತ್ ವತಿಯಿಂದ ಮಂಗಳೂರು ನಗರದ ಬಲ್ಮಠ ಸರ್ಕಾರಿ ಪದವಿ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಜಾಗೃತಿ ಅಭಿಯಾನದ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಂಗಳೂರು ತಾಲೂಕು ಪಂಚಾಯತ್  ಕಾರ್ಯನಿರ್ವಾಹಕ ಅಧಿಕಾರಿ  ಕೆ.ಸಿ ಅಪ್ಪಣ್ಣ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ್, ಮಂಗಳೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್, ಸಂಪನ್ಮೂಲ ವ್ಯಕ್ತಿಗಳಾದ ತಹಸೀನ್, ಹರಿಪ್ರಸಾದ್ ಶೆಟ್ಟಿ, ಓ.ಆರ್ ಪ್ರಕಾಶ್, ಪ್ರಮೀಳಾ ರಾವ್, ನಿಶ್ಚಿತಾ, ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಹೇಶ್ ಅಂಬೆಕಲ್ ಸ್ವಾಗತಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles