20.5 C
Karnataka
Friday, November 15, 2024

ಆಯುಷ್ಮಾನ್‌ ಭಾರತ್ ಸೌಲಭ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16 ದೂರುಗಳು

ಮಂಗಳೂರು: ಆಯುಷ್ಮಾನ್‌ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಜಿಲ್ಲೆಯಲ್ಲಿ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ನಿಗದಿತ ಸೌಲಭ್ಯ ಕೊಡದಿರುವ ಬಗ್ಗೆ ಹಾಗೂ ಹೆಚ್ಚುವರಿ ಮೊತ್ತ ಪಾವತಿಸಿರುವ ಬಗ್ಗೆ ಒಟ್ಟು 16 ದೂರುಗಳು ಮಾರ್ಚ್ 2023 ರಿಂದ ದಾಖಲಾಗಿದೆ.
ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್.ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯುಷ್ಮಾನ್‌ ಯೋಜನೆಯ ಜಿಲ್ಲಾ ಕುಂದು ಕೊರತೆ ನಿವಾರಣಾ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.ಆಯುಷ್ಮಾನ್‌ ಭಾರತ್ ಯೋಜನೆಯಡಿ ದಾಖಲಾದ ರೋಗಿಗಳಿಗೆ ಯೋಜನೆಯಡಿ ಬರುವ ಎಲ್ಲಾ ಸೌಲಭ್ಯಗಳು ಆಸ್ಪತ್ರೆಗಳು ಒದಗಿಸಲೇಬೇಕು. ಅದೇ ರೀತಿ ಸರಕಾರ ನಿಗದಿಪಡಿಸಿದ ಮೊತ್ತವನ್ನೇ ಪಡೆಯಬೇಕು, ಹೆಚ್ಚುವರಿ ಮೊತ್ತ ಪಡೆಯುವಂತಿಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ತಿಳಿಸಿದರು.
ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಒಟ್ಟು 16 ದೂರುಗಳು ಸಾರ್ವಜನಿಕರಿಂದ ಸ್ವೀಕಾರ ಗೊಂಡಿದ್ದು, ಈ ಪೈಕಿ 9 ಪ್ರಕರಣವನ್ನು ಜಿಲ್ಲಾ ಆರೋಗ್ಯಧಿಕಾರಿ ಹಂತದಲ್ಲಿ ಇತ್ಯರ್ಥ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳು ಮಾತನಾಡಿ ಆಯುಷ್ಮಾನ್‌ ಯೋಜನೆಯಡಿ ರೋಗಿಗಳಿಗೆ ಸಮರ್ಪಕ ಸೇವೆ ಆಸ್ಪತ್ರೆಗಳು ನೀಡಬೇಕು. ಯಾವುದೇ ದೂರುಗಳು ಬಾರದಂತೆ ರೋಗಿಗಳೊಂದಿಗೆ ವ್ಯವಹರಿಸಬೇಕು ಎಂದು ತಿಳಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್‌ ಕುಮಾರ್ ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಮುಕುಲ್ ಜೈನ್, ಆಯುಷ್ಮಾನ್‌ ಭಾರತ್ ನೋಡಲ್ ಅಧಿಕಾರಿ ಡಾ.ಸುದರ್ಶನ್, ಪ್ರಾದೇಶಿಕ ಸಮನ್ವಯ ಅಧಿಕಾರಿಗಳಾದ ಡಾ.ಯಶಸ್ವಿನಿ, ಡಾ.ನೌಷಾದ್ ಮತ್ತಿತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles