24.9 C
Karnataka
Friday, November 15, 2024

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮಂಗಳೂರು:2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ವೆಬ್‍ಸೈಟ್: https://ssp.postmatric.karnataka.gov.inಮೂಲಕ 2024ರ ಜನವರಿ 10ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ: https://bcwd.karnataka.gov.in, ಇಲಾಖೆಯ ಸಹಾಯವಾಣಿ ಸಂಖ್ಯೆ: 8050770005 ಮತ್ತು ವೆಬ್‍ಸೈಟ್ ವಿಳಾಸ: bcwdhelpline@gmail.com, ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವೆಬ್‍ಸೈಟ್ ವಿಳಾಸ: postmatrichelp@karnataka.gov.inಮತ್ತು ದೂರವಾಣಿ ಸಂಖ್ಯೆ: 1902 ಅನ್ನು ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles