25.4 C
Karnataka
Thursday, November 21, 2024

ಹಿಂದುಳಿದ ವರ್ಗಗಳ ಹಾಸ್ಟೆಲ್ : ಅರ್ಜಿ ಆಹ್ವಾನ

ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೊತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ./ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ.& ಎಸ್.ಟಿ.ರೂ. 2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1.00 ಲಕ್ಷ.
ವೆಬ್‍ಸೈಟ್ shp.karnataka.gov.in/bcwd ಮೂಲಕ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ತಾಲೂಕುವಾರು ವಿದ್ಯಾರ್ಥಿನಿಲಯಗಳಲ್ಲಿ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in/ ಪರಿಶೀಲಿಸಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@gmail.com ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಅಥವಾ ಸಹಾಯವಾಣಿ ಸಂಖ್ಯೆ 8050770005 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles