23.1 C
Karnataka
Wednesday, May 20, 2026

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗದ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ- ರೂ. 2.50 ಲಕ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ- ರೂ. 1.00 ಲಕ್ಷ. ವಿದ್ಯಾರ್ಥಿಗಳು ವೆಬ್‍ಸೈಟ್ https://shp.karnataka.gov.in/bcwd ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಂಖಾತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ/ ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ (ಸಹಾಯವಾಣಿ ಸಂಖ್ಯೆ 8050770004) ಸಂಪರ್ಕಿಸಬಹುದು
ಎಂದು ಮಂಗಳೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles