18.6 C
Karnataka
Saturday, November 23, 2024

ಲಂಚ ಸ್ವೀಕಾರ ಆರೋಪ: ಮುಡಾ ಕಮಿಷನರ್ ಮನ್ಸೂರ್ ಅಲಿಗೆ ಜಾಮೀನು ನಿರಾಕರಣೆ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧನಕ್ಕೊಳಗಾಗಿದ್ದ ಮುಡಾ ಕಮಿಷನರ್ ಮನ್ಸೂರ್ ಅಲಿ ಮತ್ತು ಬ್ರೋಕರ್ ಮುಹಮ್ಮದ್ ಸಲೀಂ ಅವರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

ಮಾ. 23 ರಂದು ಮುಡಾ ಆಯುಕ್ತ ಮನ್ಸೂರ್ ಅಲಿ ನಿರ್ದೇಶನದಂತೆ ಬ್ರೋಕರ್ ಮಹಮ್ಮದ್ ಸಲಿಂ ದೂರುದಾರರಿಂದ 25,00,000ರೂ. (ಇಪ್ಪತ್ತೈದು ಲಕ್ಷ) ಲಂಚದ ಹಣವನ್ನು ಸ್ವೀಕರಿಸುವಾಗ ಮೂಡಾ ಆಯುಕ್ತ ಮತ್ತು ಲಂಚದ ಹಣವನ್ನು ಸ್ವೀಕರಿಸಿದ ಬ್ರೋಕರ್ ಮಹಮ್ಮದ್ ಸಲಿಂ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಬ೦ಧಿಸಿ ಅಪರಾಧ ಕ್ರಮಾಂಕ 03/2024 ಕಲಂ 7(ಎ) ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988 (ತಿದ್ದುಪಡಿ ಕಾಯ್ದೆ, 2018) ರಡಿ ಪ್ರಕರಣ ದಾಖಲಿಸಿದ್ದರು. ಅವರನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ, ಮಂಗಳೂರು ಇಲ್ಲಿಗೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಎ. 8ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಆರೋಪಿಗಳು ನ್ಯಾಯಾಲಯಕ್ಕೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಎ.5 ರಂದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾ ಎಸ್ . ಅವರು ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿ, ಆರೋಪಿತರಿಗೆ ಜಾಮೀನು ನಿರಾಕರಿಸಿರುತ್ತಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ರವರು ವಾದಿಸಿರುತ್ತಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles