24.5 C
Karnataka
Thursday, April 30, 2026

ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯತ್: ಡಿಸೆಂಬರ್ 21 ರಂದು ಚುನಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪಟ್ಟಣ ಪಂಚಾಯತ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‍ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿಗಳು ಡಿಸೆಂಬರ್ 2 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ಡಿಸೆಂಬರ್ 9 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿಸೆಂಬರ್ 10 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿಸೆಂಬರ್ 12 ಕೊನೆಯ ದಿನ. ಮತದಾನ ಡಿಸೆಂಬರ್ 21 ರಂದು ಬೆಳಿಗ್ಗೆ 7 ಯಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 23 ರಂದು ಮರು ಮತದಾನ ಇದ್ದಲ್ಲಿ ನಡೆಸಲಾಗುತ್ತದೆ. ಡಿಸೆಂಬರ್ 24 ರಂದು ಮತ ಎಣಿಕೆಯು ಆಯಾ ತಾಲೂಕಿನ ಕೇಂದ್ರ ಸ್ಥಳದಲ್ಲಿ ನಡೆಯಲಿದೆ.
ಚುನಾವಣೆ ನೀತಿ ಸಂಹಿತೆಯು ಡಿ.2 ರಿಂದ 24 ರವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles