ಮಂಗಳೂರು:ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನ ಬಾಲ ಗೌರವ ಪ್ರಶಸ್ತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
18 ವರ್ಷದೊಳಗಿನ ಮಕ್ಕಳು ಕ್ರೀಡೆ, ಸಂಗೀತ ,ನೃತ್ಯ ಬಹುಮುಖ ಪ್ರತಿಭೆ ,ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಹೀಗೆ 6 ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ 2022-23ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದು ಪುರಸ್ಕøತರಾದ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಸ್ತಾವನೆಯನ್ನು ತಮ್ಮ ಸ್ವಯಂ ಧೃಡಿಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ ವಿವರಗಳನ್ನು ಒಳಗೊಂಡ ಮನವಿಯೊಂದಿಗೆ ನವೆಂಬರ್ 18ರೊಳಗೆ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ಅಂಚೆ ಮುಖಾಂತರ ತಲುಪುವಂತೆ ಕಳುಹಿಸಬೇಕು.
ಅರ್ಜಿ ನಮೂನೆಗಳನ್ನು ಇಲಾಖೆಯ ವೆಬ್ ಸೈಟ್ https://balavikasaacademy.karnataka.gov.in ನಲ್ಲಿ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀಶಕ್ತಿ ಭವನ, ಎರಡನೇ ಮಹಡಿ, ಮೆಸ್ಕಾಂ ಬಳಿ ಮಂಗಳೂರು, ದೂರವಾಣಿ ಸಂಖ್ಯೆ 0824-2451254,2453071 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


