21.7 C
Karnataka
Thursday, November 21, 2024

ಭೂಮಿ ಯೋಜನೆ: ದ.ಕ. ಪ್ರಥಮ

ಮಂಗಳೂರು: ಭೂಮಿ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ 17149 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ.
ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆಯುಕ್ತ ಪೆಮ್ಮಲ ಸುನೀಲ್ ಕುಮಾರ್ ಅವರು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಅಭಿನಂದನಾ ಪತ್ರ ಕಳುಹಿಸಿದ್ದು, ಇದಕ್ಕೆ ಸಹಕರಿಸಿದ ಎಲ್ಲ ಅಧಿಕಾರಿ ಸಿಬ್ಬಂದಿಗಳಿಗೆ ಅಭಿನಂದಿಸಿದ್ದಾರೆ.
ಬೆಳ್ತಂಗಡಿ ತಾಲೂಕು ರಾಜ್ಯ ಮಟ್ಟದಲ್ಲಿ ಪ್ರಥಮ ಹಾಗೂ ಬಂಟ್ವಾಳ ತಾಲೂಕು ದ್ವಿತೀಯ ಸ್ಥಾನ ಪಡೆದಿರುತ್ತದೆ. ಅದೇ ರೀತಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕು ಕಂದಾಯ ಇಲಾಖೆಯಲ್ಲಿಯೂ ಉತ್ತಮ ಸಾಧನೆ ಮಾಡಿರುವುದಕ್ಕೆ ಕಂದಾಯ ಆಯುಕ್ತರು ಅಭಿನಂಧಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles