16.7 C
Karnataka
Saturday, November 23, 2024

ಮಂಗಳೂರು ದಕ್ಷಿಣ ಕ್ಷೇತ್ರದಿಂದ 40,000 ಕ್ಕೂ ಹೆಚ್ಚಿನ ಮತಗಳ ಮುನ್ನಡೆಗೆ ಶ್ರಮ: ಶಾಸಕ ವೇದವ್ಯಾಸ್‌ ಕಾಮತ್‌

ಮಂಗಳೂರು: ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ “ಚುನಾವಣಾ ಕಾರ್ಯನಿರ್ವಹಣಾ ತಂಡ”ದ ಸಭೆಯು ನಗರದ ಅಟಲ್‌ ಸೇವಾ ಕೇಂದ್ರದಲ್ಲಿ ನಡೆಯಿತು.

ಕಾರ್ಯನಿರ್ವಹಣಾ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್‌ ಕಾಮತ್‌ ರವರು, ಭಾರತದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ಬಾರಿ ಬಿಜೆಪಿಯು 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಶತಃ ಸಿದ್ಧವಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್‌ ಚೌಟರವರನ್ನು ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಲು ಮಂಗಳೂರು ದಕ್ಷಿಣ ಕ್ಷೇತ್ರದಿಂದ 40,000 ಕ್ಕೂ ಹೆಚ್ಚಿನ ಮತಗಳ ಮುನ್ನಡೆ ದೊರಕಿಸಿ ಕೊಡುವುದು ನಮ್ಮೆಲ್ಲರ ಜವಾಬ್ದಾರಿ. ಹಾಗಾಗಿ ಮುಂದಿನ 35 ರಿಂದ 40 ದಿನಗಳ ಕಾಲ ಪಕ್ಷಕ್ಕಾಗಿ ಸಂಪೂರ್ಣ ಸಮಯ ಕೊಡುವ ಮೂಲಕ ಈಗಿನಿಂದಲೇ ಕಾರ್ಯೋನ್ಮುಖರಾಗೋಣವೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್‌ ಕುಮಾರ್‌, ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್‌ ಕಂಡೆಟ್ಟು, ಜಿಲ್ಲಾ ಉಪಾಧ್ಯಕ್ಷರು ಹಾಗೂ ಮಂಡಲದ ಚುನಾವಣಾ ಪ್ರಭಾರಿಗಳಾದ ರಾಕೇಶ್‌ ರೈ, ಲೋಕಸಭಾ ಚುನಾವಣಾ ಮಂಡಲ ಪ್ರಭಾರಿಗಳಾದ ರವಿಶಂಕರ್‌ ಮಿಜಾರ್‌, ಲೋಕಸಭಾ ಚುನಾವಣಾ ಮಂಡಲ ಸಂಚಾಲಕರಾದ ವಿಜಯ್‌ ಕುಮಾರ್‌ ಶೆಟ್ಟಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್‌ ಕುಮಾರ್‌ ಹಾಗೂ ರಮೇಶ್‌ ಹೆಗ್ಡೆ ಸೇರಿದಂತೆ ಚುನಾವಣಾ ಕಾರ್ಯನಿರ್ವಹಣಾ ತಂಡದ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles