17.9 C
Karnataka
Saturday, November 23, 2024

ಬಲಿಷ್ಠ ಭಾರತ ನಿರ್ಮಾಣದಲ್ಲಿ ವಕೀಲರ ಸಮುದಾಯದ ಪಾತ್ರ ದೊಡ್ಡದು: ಪ್ರತಾಪ್ ಸಿಂಹ ನಾಯಕ್

ಮಂಗಳೂರು: ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಬಿಜೆಪಿಯ ಜಿಲ್ಲಾ ಚುನಾವಣೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು ವಕೀಲರ ಮಾತಿಗೆ ಸಮಾಜದಲ್ಲಿ ತೂಕ ಹೆಚ್ಚು. ಅವರ ಸಲಹೆಗಳನ್ನು ಮೀರುವ ವ್ಯಕ್ತಿಗಳು ಯಾರೂ ಇಲ್ಲ. ಭಾರತದ ಸ್ವಾತಂತ್ರ್ಯ ಹೋರಾಟ ಕಾಲದಲ್ಲಿ ಸಾವಿರಾರು ವಕೀಲರು ದಿಟ್ಟತನದಿಂದ ಕಾರ್ಯನಿರ್ವಹಿಸಿದ್ದರ ಫಲವಾಗಿಯೇ ಸ್ವಾತಂತ್ರ್ಯದ ಕಿಚ್ಚು ಎಲ್ಲೆಡೆ ಹಬ್ಬಿತು. ಆ ಬಳಿಕ ತುರ್ತು ಪರಿಸ್ಥಿತಿಯ ಸಂದದರ್ಭದಲ್ಲಿ ಸಂವಿಧಾನದ ಆಡಳಿತದ ಮರುಸ್ಥಾಪನೆಗೆ ನಡೆದ ಹೋರಾಟದಲ್ಲೂ ವಕೀಲರ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಅಂತೆಯೇ ಈಗ ಸ್ವತಂತ್ರ ಭಾರತ ಇನ್ನೊಂದು ಮಹತ್ವದ ಮಜಲಿನಲ್ಲಿ ಬಂದು ನಿಂತಿದೆ. ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ವಿಕಸಿತ ಭಾರತದ ಕನಸು ಕಾಣುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ವಕೀಲರ ಸಮುದಾಯ ತಮ್ಮ ಯೋಗದಾನವನ್ನು ನೀಡಬೇಕಿದೆ ಎಂದು ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದಲ್ಲಿ ಆದ ಬದಲಾವಣೆಗಳು ಮತ್ತು ಅಭಿವೃದ್ಧಿಯ ಮಹಾ ಪರ್ವವನ್ನು ನೆನಪಿಸಿದರು. ವಕೀಲರ ಸಮುದಾಯ ತಮ್ಮ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಅವರ ಕೈಬಲಪಡಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಹಿರಿಯರಾದ ಮೋನಪ್ಪ ಭಂಡಾರಿ ಅವರು ವಕೀಲರ ಸಮುದಾಯಕ್ಕೆ ಮಾರ್ಗದರ್ಶನ ಮಾಡಿದರು.
ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ, ವಿಕಸಿತ ಭಾರತವನ್ನು ಕಟ್ಟಲು ವಕೀಲರ ಸಮುದಾಯ ಮಹತ್ವದ ಯೋಗದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದರು.ಶಂಭು ಶರ್ಮಾ, ಸುಧಾಕರ ಜೋಶಿ, ಪ್ರಕೋಷ್ಠಗಳ ಜಿಲ್ಲಾ ಸಂಚಾಲಕ ಪ್ರಸನ್ನ ದರ್ಭೆ ಮುಂತಾದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles