18.6 C
Karnataka
Saturday, November 23, 2024

ಬಿಜೆಪಿ ಮಹಿಳಾ ಮೋರ್ಚಾದಿ೦ದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ

ಮ೦ಗಳೂರು: ಜೆರೋಸಾ ಶಾಲೆಯಲ್ಲಿ ಶ್ರೀರಾಮ, ಹಿಂದೂ ಧರ್ಮ, ಹಾಗೂ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಿದ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎ೦ದು ಆಗ್ರಹಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಮಹಿಳಾ ಮೋರ್ಚಾ ವತಿಯಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಈ ಬಗ್ಗೆ ಪೋಷಕರು ಶಾಲೆಯ ಆಡಳಿತ ಮಂಡಳಿಯ ಗಮನಕ್ಕೆ ತಂದರೂ ಸಹ ಜವಾಬ್ದಾರಿ ಸ್ಥಾನದಲ್ಲಿರುವವರು ಯಾವುದೇ ವಿಚಾರಣೆ ನಡೆಸದೇ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಏಕಪಕ್ಷೀಯವಾಗಿ ತೀರ್ಮಾನಿಸಿ ಸಮಜಾಯಿಸಿ ನೀಡಿದ ಕಾರಣ ಅನಿವಾರ್ಯವಾಗಿ ಪೋಷಕರು ಪ್ರಕರಣವನ್ನು ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರ ಗಮನಕ್ಕೆ ತಂದು ನ್ಯಾಯಕ್ಕಾಗಿ ಮನವಿ ಮಾಡಿದ ಮೇರೆಗೆ ಶಾಸಕರು ಕ್ಷೇತ್ರದ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಶಾಲೆಯ ಆಡಳಿತ ಮಂಡಳಿಗೆ ಭೇಟಿ ನೀಡಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದ ಪರಿಣಾಮ ಸದರಿ ಶಿಕ್ಷಕಿಯನ್ನು ವಜಾಗೊಳಿಸಿ ತನಿಖೆಗೆ ಆದೇಶಿಸಲಾಗಿತ್ತು.ಆದರೆ ತನಿಖೆಯ ಆರಂಭಕ್ಕೂ ಮುನ್ನ ರಾಜಕೀಯ ಪ್ರೇರಿತವಾಗಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನೇ ವರ್ಗಾವಣೆ ಮಾಡಿರುವುದನ್ನು ನೋಡಿದರೆ ಇದರ ಹಿಂದೆ ಭಾರೀ ಷಡ್ಯಂತ್ರವೇ ಅಡಗಿರುವುದು ಸ್ಪಷ್ಟವಾಗುತ್ತಿದೆ ಮತ್ತು ತನಿಖೆಯು ಪಾರದರ್ಶಕವಾಗಿ ನಡೆಯುವ ಬಗ್ಗೆ ಸಂಶಯವಿದೆ.


ಸ್ವತಃ ಮಕ್ಕಳೇ ರಾಜ್ಯ ಮಾತ್ರವಲ್ಲದೇ ದೇಶದ ಮಾಧ್ಯಮಗಳ ಮುಂದೆಯೇ ತಮಗಾದ ನೋವುಗಳ ಬಗ್ಗೆ ಧೈರ್ಯವಾಗಿ ಹೇಳಿಕೊಂಡಿದ್ದಾರೆ. ಅಷ್ಟಾಗಿಯೂ ಆ ಮಕ್ಕಳೇ ಸುಳ್ಳು ಹೇಳುತ್ತಿದ್ದಾರೆ ಎಂಬಂತೆ ಬಿಂಬಿಸಿ ಶಾಲೆಯ ಆಡಳಿತ ಮಂಡಳಿ ಆರೋಪಿಗಳನ್ನು ರಕ್ಷಿಸುವ ಕೆಲಸದಲ್ಲಿ ನಿರತವಾಗಿದೆ.ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು ಸಮಾಜದ ಸ್ವಾಸ್ಥ್ಯ ಕದಡಲು ಕಾರಣವಾಗಿರುವ ಸಿಸ್ಟರ್ ಪ್ರಭಾ ಹಾಗೂ ಇಂತಹ ಕೃತ್ಯದಲ್ಲಿ ತೊಡಗಿರುವ ಈ ಸಂಸ್ಥೆಯ ಇತರ ಶಿಕ್ಷಕರ ಮೇಲೆ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ, ಮಕ್ಕಳಲ್ಲಿ ಧರ್ಮಗಳ ನಡುವೆ ದ್ವೇಷ ಭಾವನೆ, ಕೋಮು ಸೌಹಾರ್ದತೆಗೆ ಧಕ್ಕೆ, ಶಾಂತಿ ಭಂಗ, ಪ್ರಧಾನಿ ಮೋದಿ ಅವರನ್ನು ಅವಹೇಳನ ಮಾಡಿದ ಆರೋಪದ ಮೇರೆಗೆ ಗಂಭೀರ ಪ್ರಕರಣಗಳಡಿಯಲ್ಲಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮ.ನ.ಪಾ ಸದಸ್ಯರಾದ ಪೂರ್ಣಿಮಾ, ಶಕೀಲಾ ಖಾವಾ, ಲೀಲಾವತಿ ಪ್ರಕಾಶ್, ವೀಣಾ ಮಂಗಳ, ಭಾನುಮತಿ, ಶೋಭಾ, ರೂಪಶ್ರೀ, ಕಾವ್ಯ ನಟರಾಜ್, ಚಂದ್ರಾವತಿ, ಮಹಿಳಾ ಮೋರ್ಚಾದ ಪೂರ್ಣಿಮಾ ರಾವ್, ಹರಿಣಿ, ಗೀತಾ, ಜ್ಯೋತಿ, ಸವಿತ, ರೇವತಿ ಮುಂತಾದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles