23.3 C
Karnataka
Saturday, May 30, 2026

ಜೂ.14 ರಂದು ರಕ್ತದಾನಿಗಳಿಗೆ ಸನ್ಮಾನ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ಜೂ.೧೪ರಂದು ವಿಶ್ವ ರಕ್ತದಾನಿಗಳ ದಿನ ಆಚರಿಸಲಾಗುವುದು.
ಕಾರ್ಯಕ್ರಮದ ಅಂಗವಾಗಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಜಿಲ್ಲಾ ಮಟ್ಟದಲ್ಲಿ ಸನ್ಮಾನಿಸಲಾಗುವುದು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಜಿಲ್ಲೆಯ ಓರ್ವ ರಕ್ತದಾನಿಯನ್ನು ರೆಡ್‌ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ವತಿಯಿಂದ ಬೆಂಗಳೂರಿನಲ್ಲಿ ವಿಶೇಷವಾಗಿ ಗೌರವಿಸಲಾಗುವುದು.10 ಅಥವಾ ಅದಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ದ.ಕ.ಜಿಲ್ಲೆಯ ರಕ್ತದಾನಿಗಳು ತಮ್ಮ ರಕ್ತದಾನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಜೂ.6ರ ಒಳಗಾಗಿ ಕಚೇರಿ ವಿಳಾಸ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಶಾಖೆ, “ಶತಮಾನೋತ್ಸವ ಕಟ್ಟಡ” ಹಳೇ ಜಿಲ್ಲಾಧಿಕಾರಿ ಕಚೇರಿ ಆವರಣ, ಓಲ್ಡ್ ಪೋರ್ಟ್ ರೋಡ್, ಮಂಗಳೂರು -575001 ಈ ವಿಳಾಸಕ್ಕೆ ಸಲ್ಲಿಸಬೇಕು. ಈ ಹಿಂದೆ ರೆಡ್‌ಕ್ರಾಸ್ ಸಂಸ್ಥೆಯಿಂದ ರಕ್ತದಾನಕ್ಕಾಗಿ
ಸನ್ಮಾನಿತರಾದವರು ಆಯ್ಕೆಗೆ ಅರ್ಹರಾಗಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.* ದಾಖಲೆಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮೂಲಕವೂ ಕಳುಹಿಸಬಹುದಾಗಿದೆ.ವಾಟ್ಸಪ್ : 96068 66210
e mail : ircsdkd@gmai.com

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles